ದಕ್ಷಿಣ ಕನ್ನಡ | ಟೋಲ್ ಹೋರಾಟಗಾರರ ವಿರುದ್ಧ ಚಾರ್ಜ್ ಶೀಟ್

Date:

ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಹೋರಾಟ ಮಾಡಿದ್ದ ಸಾವಿರಾರು ಹೋರಾಟಗಾರ ಪೈಕಿ 101 ಮಂದಿಯ ವಿರುದ್ಧ ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

- Advertisement -

ಹಲವು ಕಾಂಗ್ರೆಸ್ ಮಾಜಿ ಶಾಸಕರು, ಕಳೆದ ಬಾರಿಯ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳು ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ ಈ ಹೋರಾಟಗಾರರ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವುದು ಹೋರಾಟಗಾರರಲ್ಲಿ ಅಚ್ಚರಿ ಮೂಡಿಸಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೋರಾಟ ಸಮಿತಿಯ ಸಂಚಾಲಕ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅವರನ್ನು ಮೊದಲ ಆರೋಪಿಯನ್ನಾಗಿ ಉಲ್ಲೇಖಿಸಿದ್ದು, ಎರಡನೇ ಆರೋಪಿಯಾಗಿ ಕೆಪಿಸಿಸಿ‌ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈ ಅವರನ್ನು ಉಲ್ಲೇಖಿಸಲಾಗಿದೆ. ಒಟ್ಟು 101 ಹೋರಾಟಗಾರರ ಹೆಸರು ಉಲ್ಲೇಖಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಹೋರಾಟಗಾರರ ಮೇಲೆ ಭಾರತೀಯ ದಂಡ ಸಂಹಿತೆ 143, 147, 341, 283 ಹಾಗೂ ಆರ್‌ಡಬ್ಲ್ಯೂ 149 ಸೆಕ್ಷನ್ ನಡಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಇದೊಂದು ಚಾರ್ಜ್ ಶೀಟ್ ಸಲ್ಲಿಸುವಂತಹ ಪ್ರಕರಣವೇ ಅಲ್ಲ. ಅಂದಿನ ಹೋರಾಟದಲ್ಲಿ ಯಾವುದೇ ಹಿಂಸಾಚಾರ, ಹೊಡೆದಾಟ ನಡೆದಿರಲಿಲ್ಲ. ಸಾರ್ವಜನಿಕರ ನ್ಯಾಯಪರವಾದ ಬೇಡಿಕೆ ಹಿನ್ನೆಲೆಯಲ್ಲಿ ಹೋರಾಟ ನಡೆದಿತ್ತು. ಇನ್ನೂ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ 101 ಮಂದಿಯ ಮೇಲೆ ಚಾರ್ಜ್ ಶೀಟ್ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್ ನಾಯಕರೇ ಭಾಗವಹಿಸಿದ್ದ ಹೋರಾಟದ ವಿರುದ್ಧ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದು ಆತಂಕದ ವಿಚಾರ” ಎಂದು ಪ್ರತಿಕ್ರಿಯೆ ನೀಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಲ್ಲಿದ್ದರೂ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವಂತಿದೆ” ಎಂದು ಮುನೀರ್ ವ್ಯಂಗ್ಯವಾಡಿದ್ದಾರೆ.

“ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 7ರಿಂದ 8 ಟೋಲ್‌ಗೇಟ್‌ಗಳು ನಿರ್ಮಾಣವಾಗಲಿದೆ. ಈ ಟೋಲ್‌ಗೇಟ್‌ಗಳ ವಿರುದ್ದ ಮುಂದಿನ ದಿನಗಳಲ್ಲಿ ಜನ ಹೋರಾಟ ನಡೆಸಬಾರದೆಂಬ ಕಾರಣಕ್ಕಾಗಿ ಜನರಲ್ಲಿ ಭಯ ಸೃಷ್ಟಿಸಲು ಬಿಜೆಪಿ ಸಂಸದರು ಹಾಗೂ ಮಂಗಳೂರು ಮತ್ತು ಸುರತ್ಕಲ್ ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸುರತ್ಕಲ್ ಪೊಲೀಸರು ಟೋಲ್ ಗೇಟ್ ವಿರೋಧಿ ಹೋರಾಟಗಾರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸುವಂತೆ ತಂತ್ರ ಹೆಣೆದಿದ್ದಾರೆ” ಎಂದು ಆರೋಪಿಸಿದರು.

“ಪೊಲೀಸರು ಹಾಗೂ ಸಂಸದರ ಈ ತಂತ್ರಕ್ಕೆ ಭಯ ಪಡುವುದಿಲ್ಲ, ಕಾನೂನು ಮೂಲಕ ಎದುರಿಸುತ್ತೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮುಖ ಇದ್ದರೆ ಹೋರಾಟಗಾರರ ಮೇಲಿನ ಚಾರ್ಜ್ ಶೀಟನ್ನು ವಾಪಸು ಪಡೆಯಲು ಮುಂದಾಗಲಿ” ಎಂದು ಮುನೀರ್ ಕಾಟಿಪಳ್ಳ ಪ್ರತಿಸವಾಲು ಹಾಕಿದ್ದಾರೆ.

ಘಟನೆ ಹಿನ್ನೆಲೆ 

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್ ಎನ್‌ಐಟಿಕೆ ಬಳಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಬಿಜೆಪಿಯನ್ನು ಹೊರತುಪಡಿಸಿದಂತೆ ಇತರೆಲ್ಲ ಪಕ್ಷಗಳು ಸಾರ್ವಜನಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಹೋರಾಟ ನಡೆಸಿದ್ದರು. ಸುದೀರ್ಘ 35 ದಿನಗಳ ಕಾಲ ಈ ಧರಣಿ ಸತ್ಯಾಗ್ರಹ ನಡೆದಿತ್ತು. ಹೋರಾಟದ ಕೊನೆಯ ದಿನ ಟೋಲ್ ಹೋರಾಟಗಾರರು ಮುತ್ತಿಗೆ ಹಾಕಿದ್ದರು. ಹೋರಾಟಕ್ಕೆ ಮಣಿದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಕೊನೆಗೆ ಟೋಲ್‌ಗೇಟನ್ನು ರದ್ಧುಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

2022ರ ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ಅಕ್ರಮ ಟೋಲ್‌ಗೇಟ್ ವಿರುದ್ಧ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಅಹೋರಾತ್ರಿಯ ಹೋರಾಟ ನಡೆದಿತ್ತು. ಹೋರಾಟದಲ್ಲಿ ಕಾಂಗ್ರೆಸ್, ಕಮ್ಯೂನಿಸ್ಟ್ ಪಕ್ಷ, ಜನತಾ ದಳ, ಎಎಪಿ, ಕಾರ್ಮಿಕ ಸಂಘಟನೆ, ಟ್ಯಾಕ್ಸಿ ಚಾಲಕರ ಸಂಘಟನೆ, ಸಮಾನ ಮನಸ್ಕ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...