ದಕ್ಷಿಣ ಕನ್ನಡ | ಭ್ರಷ್ಟಾಚಾರ, ವಂಚನೆಯೇ ಕೇಂದ್ರ ಸರ್ಕಾರದ ಸಾಧನೆ: ವಕೀಲ ಎಸ್. ಬಾಲನ್ ವಾಗ್ದಾಳಿ

Date:

ನೋಟು ಅಮಾನ್ಯೀಕರಣಕ್ಕೆ 10 ವರ್ಷ ವಾಗಿದ್ದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ದ ಇಂದು ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಹಿರಿಯ ವಕೀಲ ಎಸ್ ಬಾಲನ್ ಅವರು ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.

- Advertisement -

ನೋಟು ಅಮಾನ್ಯೀಕರಣಕ್ಕೆ 10 ವರ್ಷ – ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರಕಾರದ ವಿರುದ್ಧ ‘ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ’ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ರವಿವಾರ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಪ್ರಧಾನ ಭಾಷಣ ಮಾಡಿದ ಖ್ಯಾತ ಮಾನವ ಹಕ್ಕು ಹೋರಾಟಗಾರ ಹಾಗೂ ರಾಜ್ಯ ಹೈಕೋರ್ಟ್‌ನ ಹಿರಿಯ ವಕೀಲ ಎಸ್. ಬಾಲನ್ ಅವರು “ಕೇಂದ್ರದ ಬಿಜೆಪಿ ನೇತೃತ್ವದ ಸರಕಾರಕ್ಕೆ ಯಾವುದೇ ಸ್ಪಷ್ಟ ನೀತಿಗಳಿಲ್ಲ. ಭ್ರಷ್ಟಾಚಾರ, ಮೋಸ ಹಾಗೂ ವಂಚನೆಯೇ ಈ ಸರಕಾರದ ಸಾಧನೆಯಾಗಿದೆ. ದೇಶ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಪ್ರಗತಿಪರ ಪಕ್ಷಗಳು ಹಾಗೂ ಸಂಘಟನೆಗಳು ಬೀದಿ ಹೋರಾಟಕ್ಕೆ ಇಳಿಯಬೇಕು” ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ...

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ ನಿಲುವಿನಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ, ಜನಪರ ಧೋರಣೆಯನ್ನು ಉಳಿಸಿಕೊಂಡು ಬಂದಿದೆ. ಸಾರ್ಥಕ 49 ವರ್ಷಗಳನ್ನು ಪೂರೈಸಿ, ಈಗ 50ನೇ ವರ್ಷಕ್ಕೆ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ...

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ ಇದಾಗಿದೆ,ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಮಂಡ್ಯ, ಮೈಸೂರು ಸೇರಿದಂತೆ 10 ರಿಂದ 15 ಜಿಲ್ಲೆಗಳಲ್ಲಿ...

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’:...

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್‌ಐಆರ್‌ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ...

“ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಕಾರ್ಪೊರೇಟ್, ಕೋಮುವಾದಿ, ಫ್ಯಾಸಿಸ್ಟ್ ಹಾಗೂ ಸಂವಿಧಾನ ವಿರೋಧಿ ಧೋರಣೆಯನ್ನು ಹೊಂದಿದ್ದು, ದೇಶವನ್ನು ಕತ್ತಲೆಗೆ ತಳ್ಳಿದೆ. ದೇಶವನ್ನು, ಸಂವಿಧಾನವನ್ನು, ಪ್ರಜಾಪ್ರಭುತ್ವವನ್ನು ಉಳಿಸಬೇಕು.ಇದಕ್ಕೆ ವಿರುದ್ಧವಾಗಿ ನಡೆಯುವ ಬಿಜೆಪಿ, ಆರ್‌ಎಸ್‌ಎಸ್‌ನ್ನು ತೊಲಗಿಸಬೇಕು” ಎಂದು ಬಾಲನ್ ಅಭಿಪ್ರಾಯಪಟ್ಟರು.

ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಪರ ರಾಜ್ಯ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಿ, ನ್ಯಾಯ ದೊರಕಿಸಿಕೊಟ್ಟಿರುವುದನ್ನು ಸ್ಮರಿಸಿದ ವಕೀಲ ಬಾಲನ್ ಅವರು “ಇದರಿಂದಾಗಿ ಸಂಡೆ ಬಜಾರ್ ಸಂಡೆ ಬಜಾರ್ ವ್ಯಾಪಾರಿಗಳಿಗೆ ಅನುಮತಿ ಸಿಕ್ಕಿತು. ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಬೀದಿಗೆ ತಳ್ಳಲಾಗಿದೆ. ಅವರ ಪರ ಹೋರಾಟ ನಡೆಸಿದ್ದರೂ ನ್ಯಾಯದೊರಕಿಲ್ಲ.” ಎಂದು ಹೇಳಿದರು.

ವೆಲ್ಫೇರ್ ಪಾರ್ಟಿ ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಎಂ. ದಿವಾಕರ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಪೆದ್ರೆಂಗಿ ಹಾಗೂ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವೆಲ್ಫೇರ್ ಪಾರ್ಟಿ ರಾಜ್ಯ ಕೋಶಾಧಿಕಾರಿ ಅಬ್ದುಸ್ಸಲಾಂ ಸಿ.ಎಚ್, ಜಿಲ್ಲಾ ಉಪಾಧ್ಯಕ್ಷರಾದ ಆಸಿಫ್ ಇಕ್ಬಾಲ್, ಆಯಿಷಾ ಮುಮ್ತಾಝ್, ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಸೈಫ್, ವಕ್ತಾರರಾದ ಎಸ್.ಎಂ. ಮುತ್ತಲಿಬ್, ಅಡ್ವೋಕೇಟ್ ಸರ್ಫರಾಝ್ , ಜಿಲ್ಲಾ ಮಾಧ್ಯಮ ವಕ್ತಾರ ಅಬ್ದುಲ್ ಖಾದರ್ ಕುಕ್ಕಾಜೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹುಲಿ ದತ್ತು ಪಡೆದು ವಿಭಿನ್ನವಾಗಿ ಬಿ.ವಿ ಶ್ರೀನಿವಾಸ್ ಜನ್ಮದಿನಾಚರಣೆ!

ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ...

ದಕ್ಷಿಣ ಕನ್ನಡ | ಹೊಸ ಕಾರ್ಮಿಕ ಸಂಹಿತೆಗಳು ಕಟ್ಟಡ ಕಾರ್ಮಿಕರ ಹಕ್ಕುಗಳಿಗೆ ಮಾರಕ: ಯೋಗೀಶ್ ಜಪ್ಪಿನಮೊಗರು

ಕೇಂದ್ರ ಸರ್ಕಾರದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರು ದಶಕಗಳ ಹೋರಾಟದ...

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ ಮಟ್ಟಕ್ಕೆ ಏರಿದ ಮೆಕ್ಕೆಜೋಳದ ಧಾರಣೆ

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ...

ರಾಯಚೂರು | ಲಿಂಗಸುಗೂರು ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಅಕ್ರಮ ಸಾಗಾಟ ಜಪ್ತಿ

ತಾಲ್ಲೂಕಿನ ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಕಡಿದು ದೇವದುರ್ಗ ತಾಲ್ಲೂಕಿನ ಊಟಿ...