ದಕ್ಷಿಣ ಕನ್ನಡ | ಗೋವಾ ಮದ್ಯ ಅಕ್ರಮ ಸಾಗಣೆ: ಇಬ್ಬರ ಬಂಧನ, 438 ಲೀಟರ್ ಮದ್ಯ ವಶ

Date:

ಗೋವಾದಿಂದ ಕೇರಳಕ್ಕೆ ಮಂಗಳೂರು ಮೂಲಕ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗದ ಅಬಕಾರಿ ಅಧಿಕಾರಿಗಳು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ ಮತ್ತು ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಎಂದು ಗುರುತಿಸಲಾಗಿದೆ.

- Advertisement -

ಗೋವಾದಿಂದ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ವಿಶೇಷ ಅಬಕಾರಿ ತಂಡವು ಸ್ವಿಫ್ಟ್ ಡಿಜೈರ್ ಕಾರನ್ನು ವಶಪಡಿಸಿಕೊಂಡು 438 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿಎಚ್ ಅವರ ಮಾರ್ಗದರ್ಶನ ಮತ್ತು ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ವಿಶೇಷ ತಂಡದಲ್ಲಿ ಮಂಗಳೂರು ಉಪವಿಭಾಗದ ಉಪಾಧೀಕ್ಷಕಿ ಗಾಯತ್ರಿ ಸಿಎಚ್, ಬಂಟ್ವಾಳ ಉಪವಿಭಾಗದ ಸಂತೋಷ್ ಮೋದಗಿ, ಬಂಟ್ವಾಳ ತಾಲ್ಲೂಕು ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್‌ಪೋಸ್ಟ್ ನಿರೀಕ್ಷಕ ದತ್ತಗುರು ಅಥೇನಿ, ಸಬ್ ಇನ್ಸ್‌ಪೆಕ್ಟರ್‌ಗಳಾದ ಜಯಪ್ಪ, ಶಿವಶಂಕರ್ ಮತ್ತು ಅಭಿಷೇಕ್ ಮತ್ತು ಕಾನ್‌ಸ್ಟೆಬಲ್ ಪ್ರಕಾಶ್ ಇದ್ದರು.

ಜಂಟಿ ಆಯುಕ್ತರ ಕಚೇರಿಯ ಇನ್ಸ್‌ಪೆಕ್ಟರ್ ಸುನೀತಾ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...