ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.
ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುವ ಪ್ರಥಮ ವಂದೇ ಭಾರತ್ ರೈಲು ಇದಾಗಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ವಂದೇ ಭಾರತ್ ಸೇರಿಂದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಂತೆ ಇತ್ತ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಕೇಂದ್ರ ರೈಲ್ವೇ, ಮಾಹಿತಿ ಮತ್ತು ಪ್ರಸಾರ, ಹಾಗೂ ಎಲೆಕ್ಟ್ರಾನಿಕ್ ಖಾತೆಗಳ ಸಚಿವ ಅಶ್ವಿನಿ ವೈಷ್ಣವ್ ಹಸಿರು ನಿಶಾನೆ ತೋರಿಸಿದರು.
ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣದ ಸಮಯವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವೇಗದೂತ ವಂದೇಭಾರತ್ ರೈಲನ್ನು ಚಾಲನೆ ನೀಡಿದೆಯಾದರೂ, ಒಟ್ಟಾರೆ ಭಾರತದ ವಂದೇ ಭಾರತ್ ರೈಲುಗಳಲ್ಲಿ ಅತೀ ಕಡಿಮೆ ವೇಗದಲ್ಲಿ ಓಡುವ ರೈಲು ಇದಾಗಲಿದೆ ಮತ್ತು ಅತೀ ಹೆಚ್ಚು ದೂರವನ್ನು ಓಡುವ ವಂದೇ ಭಾರತ್ ರೈಲು ಕೂಡಾ ಇದಾಗಿದೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ, ಕಿಶೋರ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಉಪಸ್ಥಿತರಿದ್ದರು.





