ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ ಬಗ್ಗೆ ರಾಜ್ಯ ಮಟ್ಟದ ಕಾರ್ಯಗಾರ ಮಂಗಳೂರಿನಲ್ಲಿ ನಡೆಯಿತು.
ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನ ಬಗ್ಗೆ ಪ್ರಗತಿ ಪರಿಶೀಲನೆಯ ಸಂದರ್ಭದಲ್ಲಿ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀಡುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಮತ್ತು ಮಂಗಳೂರು ಮಹಾನಗರ ದೇಶದಲ್ಲಿಯೇ 4ನೇ ಸ್ಥಾನ ಪಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲಾ – ಕಾಲೇಜುಗಳ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನ ಮಾರಾಟದಂತೆ ಕ್ರಮ ವಹಿಸುವುದು ಮುಖ್ಯವಾಗಿದೆ. ಹೀಗಾಗಿ ಅಂತ ಅಂಗಡಿಗಳಿಗೆ ತಂಬಾಕು ಮಾರಾಟ ಪರವಾನಿಗೆಯನ್ನು ಮಹಾನಗರ ಪಾಲಿಕೆ ಮತ್ತು ಉಳಿದ ನಗರ ಆಡಳಿತಗಳು ಸದ್ರಿ ಪರವಾನಿಗೆ ನೀಡುವಾಗ ಗಮನಿಸುತ್ತಿವೆ.
ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ರಾಜ್ಯದಲ್ಲಿ ಪ್ರಥಮ ಸ್ಥಾನ ಮತ್ತು ದೇಶ ಮಟ್ಟದಲ್ಲಿ ಮಂಗಳೂರು ಮಹಾ ನಗರ 4ನೇ ಸ್ಥಾನ ಪಡೆಯಲು ಸಹಕಾರ ನೀಡಿದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ ಮತ್ತು ನಗರ ಆಡಳಿತಗಳು ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ನವೀನ ಚಂದ್ರ ಕುಲಾಲ್ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದ್ದಾರೆ.




