ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

Date:

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಅಕ್ರಮ ದಾಸ್ತಾನು ಮಾಡಿ ಸಾಗಾಟ ಮಾಡುತ್ತಿದ್ದ 1,450.340 ಲೀಟರ್ ಗೋವಾ ಮದ್ಯ ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯ ಹಾಗೂ ವಾಹನಗಳ ಅಂದಾಜು ಮೌಲ್ಯ ₹20,37,340 ಎಂದು ಇಲಾಖೆ ತಿಳಿಸಿದೆ.

- Advertisement -

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಮಿತ್ ಬಿನ್ ಅಣ್ಣು ಪೂಜಾರಿ ಅವರಿಗೆ ಸೇರಿದ ಜಾಗದಲ್ಲಿ ಗೋವಾ ಮದ್ಯ ಅಕ್ರಮವಾಗಿ ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ಅಧಿಕಾರಿಗಳಿ ದಾಳಿ ನಡೆಸಿದ್ದು ಈ ವೇಳೆ 180 ಮಿ.ಲೀ ಸಾಮರ್ಥ್ಯದ ರಾಯಲ್ ಬ್ಲೂ ಮಾಲ್ಟ್ ವಿಸ್ಕಿಯ 146 ಪೆಟ್ಟಿಗೆಗಳಲ್ಲಿ ಒಟ್ಟು 1,261.440 ಲೀಟರ್ ಮದ್ಯ ಪತ್ತೆಯಾಗಿದ್ದು, ₹7,72,340 ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಸಂಪ್ರಿತ್ ಕಾಸರಗೋಡು ಎಂಬಾತನ ಹೆಸರು ಪ್ರಕರಣದಲ್ಲಿ ಉಲ್ಲೇಖವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’...

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದ್ದಾನೆ. ಸಚಿವ ಎಂ.ಬಿ. ಪಾಟೀಲ್ ಅವರು ಶಂಕರ್ ಬಿದರಿ ಮತ್ತು ಮನು ಬಳಿಗಾರ್ ಅವರನ್ನು ‘21ನೇ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ ಸಾತ್ಯಕಿ ಸಾವರ್ಕರ್, ಇದೀಗ ಸೋನಿಯಾ ಗಾಂಧಿ ಅವರ ಪುಸ್ತಕದ ಐತಿಹಾಸಿಕ ಉಲ್ಲೇಖಗಳನ್ನು ಸಹಿಸದೆ ಕಾನೂನು ನೋಟಿಸ್ ನೀಡಿ ಮತ್ತೆ ಪ್ರಚಾರಕ್ಕಿಳಿದಿದ್ದಾನೆ....

ಉತ್ತರ ಕನ್ನಡ: ಬೇಡ್ತಿ ಹೋರಾಟ ಮತ್ತು ಸಂಸದ-ಶಾಸಕರ ಸೋಗಲಾಡಿತನ

ಬೇಡ್ತಿ ಸತ್ಯಾಗ್ರಹ ಎಷ್ಟು ಯೋಜನಾ ಬದ್ದವಾಗಿರುತ್ತದೆಂದರೆ, ಬೇಡ್ತಿ ನದಿ ಬಳಸುವ ಯಾವ ಯೋಜನೆಯೂ ಕಾರ್ಯಗತವಾಗದಂತೆ ಹಿಮ್ಮೆಟ್ಟಿಸಲಾಗುತ್ತಿದೆ. ಆದರೆ ಜಿಲ್ಲೆಯ ಹಿಂದುಳಿದವರು-ದುರ್ಬಲರು ಬಾಧಿತವಾಗುವ ಹಲವು ಯೋಜನೆಗಳನ್ನು ಪ್ರಭುತ್ವ ಹಠದಿಂದ ಅನುಷ್ಠಾನಗೊಳಿಸಿದೆ. ಸುಪಾ, ತಟ್ಟಿಹಳ್ಳ, ಕೊಡಸಳ್ಳಿ,...

ಕಲ್ಲಡ್ಕ ಸಮೀಪ ಕೇರಳ ನೋಂದಣಿಯ ಎರಡು ಕಾರುಗಳಲ್ಲಿ ಗೋವಾ ಮದ್ಯವನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿರುವ ಮಾಹಿತಿ ಮೇರೆಗೆ ಮತ್ತೊಂದು ಕಾರ್ಯಾಚರಣೆ ನಡೆಸಲಾಯಿತು. ಹುಂಡೈ i20 ಮತ್ತು ಮಾರುತಿ ಸುಜುಕಿ ಸ್ವಿಫ್ಟ್ ಕಾರುಗಳಲ್ಲಿ 24 ಪೆಟ್ಟಿಗೆಗಳಲ್ಲಿದ್ದ ಒಟ್ಟು 188.9 ಲೀಟರ್ ಮದ್ಯ ಪತ್ತೆಯಾಗಿದೆ. ಚಂದ್ರಶೇಖರ್, ಸಫ್ವಾನ್ ಎಂ. ಹಾಗೂ ಮಹಮ್ಮದ್ ಶಾಫಿನ್ ಎಂಬವರನ್ನು ಆರೋಪಿಗಳೆಂದು ಗುರುತಿಸಲಾಗಿದ್ದು, ಮದ್ಯ ಮತ್ತು ವಾಹನಗಳ ಒಟ್ಟು ಅಂದಾಜು ಮೌಲ್ಯ ₹12.65 ಲಕ್ಷವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಜಾರಿಗೆ ಹೋರಾಟ ತೀವ್ರ: ಸುನಂದಾ

ಐದು ದಶಕಗಳಿಂದಲೂ ಗೌರವಧನದ ಆಧಾರದಲ್ಲಿ ದುಡಿಯುತ್ತಿರುವ ಅಂಗನವಾಡಿ ನೌಕರರನ್ನು ಕನಿಷ್ಠ ವೇತನದ...

ಜನಪರ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ...

ಕೋಲಾರ | ವೆಲಾಂಗಣಿ ಚರ್ಚ್ ದರ್ಶನಕ್ಕೆ ಟಿ.ಎಸ್. ಸುಧೀರ್ ಅವರಿಂದ ಉಚಿತ ಬಸ್ ವ್ಯವಸ್ಥೆ

ತಮಿಳುನಾಡಿನ ಪ್ರಸಿದ್ಧ ವೆಲಾಂಗಣಿ ಚರ್ಚ್‌ಗೆ ತೆರಳಿ ದರ್ಶನ ಪಡೆಯಲು ಕ್ರೈಸ್ತ ಸಮುದಾಯದ...

ಚಿಕ್ಕಮಗಳೂರು | 38 ಕಾಡಾನೆ ಸ್ಥಳಾಂತರ; ಸ್ಥಳೀಯರಲ್ಲಿ ಆತಂಕ 

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಭೀತಿ ಸಾರ್ವಜನಿಕರಲ್ಲಿ ಶುರುವಾಗಿದೆ. ಹಾಸನ ಜಿಲ್ಲೆಯ...