ವಿದೇಶದಲ್ಲಿರುವ ಪತಿ ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ದಿಢೀರ್ ತ್ರಿವಳಿ ತಲಾಖ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಯನಗರದಲ್ಲಿ ನಡೆದಿದೆ.
ಕೇರಳ ತ್ರಿಶ್ಯೂರ್ ಮೂಲದ ಅಬ್ದುಲ್ ರಶೀದ್ ಏಳು ವರ್ಷಗಳ ಹಿಂದೆ ಸುಳ್ಯ ಬಳಿಯ ಜಯನಗರದ ಮಿಸ್ರಿಯಾ ಎಂಬಾಕೆಯನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ಮಿಸ್ರಿಯಾ ಅವರನ್ನು ವಿದೇಶಕ್ಕೆ ಕರೆಸಿಕೊಂಡಿದ್ದ ರಶೀದ್ ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯ ತವರು ಮನೆ ಸುಳ್ಯದಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದರು. ಆದರೆ ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ವಿರಸ ಉಂಟಾಗಿತ್ತು.
ಈ ಸುದ್ದಿ ಓದಿದ್ದೀರಾ? ಮಹಿಳಾ ಮೀಸಲಾತಿ | ದೇವೇಗೌಡರ ಕನಸಿಗೆ ಮರುಜೀವ: ಎಚ್ ಡಿ ಕುಮಾರಸ್ವಾಮಿ
ಕುಟುಂಬ ಕಲಹದ ಕುರಿತು ಸಂಬಂಧಿಕರು, ಹಿರಿಯರು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಆಸ್ಪದ ನೀಡದ ರಶೀದ್, ಪತ್ನಿಯ ವಾಟ್ಸಾಪ್‌ಗೆ ತ್ರಿವಳಿ ತಲಾಖ್‌ನ ಸಂದೇಶ ಕಳುಹಿಸಿದ್ದಾನೆ. ಇದರಿಂದ ನೊಂದ ಮಿಸ್ರಿಯಾ ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಕೋರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಪ್ರೊಟೆಕ್ಷನ್ ಆಫ್ ರೈಟ್ ಆಕ್ಟ್ 2019ರ ಪ್ರಕಾರ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.