ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

Date:

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ತಿಳಿಸಿದ್ದಾರೆ.

- Advertisement -

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯಬೇಕು. ಆಸ್ಪತ್ರೆಯ ವಾರ್ಡ್‍ಗಳು, ಶೌಚಾಲಯಗಳ ನಿರ್ವಹಣೆ, ಶುದ್ಧ ಕುಡಿಯುವ ನೀರು ಹಾಗೂ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...
IMG 20261116 212039

ತುರ್ತು ಚಿಕಿತ್ಸಾ ಘಟಕ (ಐಸಿಯು), ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ಪ್ರಯೋಗಾಲಯಗಳಿಗೆ ಅಗತ್ಯವಿರುವ ಆಧುನಿಕ ವೈದ್ಯಕೀಯ ಉಪಕರಣಗಳ ಖರೀದಿ ಮತ್ತು ದುರಸ್ತಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಅಲ್ಲದೆ, ಅಗತ್ಯ ಔಷಧಿಗಳ ದಾಸ್ತಾನು ಸದಾ ಲಭ್ಯವಿರುವಂತೆ ನೋಡಿಕೊಳ್ಳಲು ಅವರು ನಿರ್ದೇಶನ ನೀಡಿದರು.

ಆಸ್ಪತ್ರೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿಯನ್ನು ನಿಯಮಾನುಸಾರ ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಹಾಗೂ ರೋಗಿಗಳ ಸಹಾಯಕರಿಗೆ ಕುಳಿತುಕೊಳ್ಳಲು ಮತ್ತು ವಿಶ್ರಾಂತಿ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...

ಚಿಕ್ಕಬಳ್ಳಾಪುರ | ಮಾದಕ ವಸ್ತುಗಳ ವಿರುದ್ಧ ಕಂಕಣಬದ್ಧರಾಗಿ ಕೈ ಜೋಡಿಸೋಣ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮತ್ತು ಜೀವನ ಹಾಳಾಗು ವುದಲ್ಲದೆ,...

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...