ದಕ್ಷಿಣ ಕನ್ನಡ | ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್

Date:

ಮಂಗಳೂರು ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕೋಟೆಕಾರು ಪಟ್ಟಣ ಪಂಚಾಯತ್‍ಗೆ ಸೋಮವಾರ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿರು.

“ನೀರಿನ ಮೂಲದಿಂದ ಮನೆಗೆ ತಲುಪುವ ತನಕ ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಗಮನಹರಿಸಬೇಕು. ಕುಡಿಯುವ ನೀರಿಗೆ ಜನರು ಪರದಾಡುವಂತಹ ಸನ್ನಿವೇಶ ಯಾವುದೇ ಕಾರಣಕ್ಕೂ ಉದ್ಭವವಾಗದಂತೆ ನೊಡಿಕೊಳ್ಳಬೇಕು. ಕೊನೆಯ ಕ್ಷಣದಲ್ಲಿ ಕಾರ್ಯಪ್ರವೃತ್ತರಾಗುವ ಬದಲು ಮುಂದಾಲೋಚನೆಯಿಂದ ಯೋಜನೆಗಳನ್ನು ರೂಪಿಸಿದರೆ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗದು” ಎಂದು ಸಚಿವರು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಜ್‌ ಸಚಿವ

“ಅಭಿವೃದ್ಧಿ ಕಾಮಗಾರಿ, ಫಲಾನುಭವಿ ಆಧಾರಿತ ಯೋಜನೆಗಳು, ಸಮುದಾಯ ಕಾರ್ಯಕ್ರಮಗಳನ್ನು ಆಯಾ ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕು. ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಬಾಕಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿ, ಆರ್ಥಿಕ ಸಂಪನ್ಮೂಲಗಳನ್ನು ವೃದ್ಧಿಸಿಕೊಳ್ಳಬೇಕು” ಎಂದು ರಹೀಂ ಖಾನ್ ತಿಳಿಸಿದರು.

ಕ್ಲಸ್ಟರ್ ತ್ಯಾಜ್ಯ ನಿರ್ವಹಣೆ ಘಟಕ

“ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು ನಗರ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳು ಪರಸ್ಪರ ಹತ್ತಿರದಲ್ಲಿವೆ. ಪ್ರಸ್ತುತ ಈ ಎಲ್ಲ ಪಟ್ಟಣ ಪ್ರದೇಶಗಳಲ್ಲೂ ತ್ಯಾಜ್ಯ ನಿರ್ವಹಣಾ ಘಟಕಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಮೂರು ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯಗಳನ್ನು ನಿರ್ವಹಿಸಲು ಒಂದೇ ಕಡೆ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದೊಂದು ಉತ್ತಮ ಯೋಚನೆಯಾಗಿದೆ. ಇದರಿಂದ ಈ ಎಲ್ಲ ಪ್ರದೇಶಗಳ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ದೊಡ್ಡ ಮಟ್ಟದ ಘಟಕ ಸ್ಥಾಪಿಸುವ ಮೂಲಕ ನಿರ್ವಹಿಸಬಹುದಾಗಿದೆ. ಈ ಯೋಜನೆ ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಅನುದಾನ ನೀಡಲಿದೆ” ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಆನೆಗಳ ಹಾವಳಿ; ಸುತ್ತಲಿನ ಗ್ರಾಮಸ್ಥರಲ್ಲಿ ಭೀತಿ

ಸಚಿವರು ಕೋಟೆಕಾರು ಪಟ್ಟಣ ಪಂಚಾಯತ್ ಅಭಿವೃದ್ಧಿ ಕಾಮಗಾರಿಗಳ ವಿವರ ಪಡೆದು, ಸಿಬ್ಬಂದಿಗಳ ಕಾರ್ಯವೈಖರಿ ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಾದ ಪುರಂದರ ಕೋಟ್ಯಾನ್, ತೇಜಮೂರ್ತಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...