ದಕ್ಷಿಣ ಕನ್ನಡ | ‘ಋತು ತಾರೆ’ ಪ್ರಾಯೋಗಿಕ ಜಾರಿಗೆ ಸಿದ್ಧತೆ: ಆರೋಗ್ಯಾಧಿಕಾರಿ ಮಾಹಿತಿ

Date:

ಮಧ್ಯ ವಯಸ್ಕ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಋತುಬಂಧ ಸಮಸ್ಯೆಗಳಿಗೆ ಪೂರಕವಾಗಿ ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ‘ಋತುತಾರೆ’ ಯೋಜನೆಗೆ ದ.ಕ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ತಿಳಿಸಿದ್ದಾರೆ.

- Advertisement -

ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, “35 ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳಲ್ಲಿ ಋತುಬಂಧದ ಪೂರ್ವ ಮತ್ತು ನಂತರದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ಅರುಪೇರಾಗುತ್ತದೆ. ಸಿಡುಕು, ಮೈಬಿಸಿ, ವಿಪರೀತ ಮೈಕೈನೋವು, ನಿದ್ದೆ ಬಾರದಿರುವುದು, ಕೆಲಸ ಮಾಡಲು ಆಸಕ್ತಿ ಇಲ್ಲದಿರುವುದು ಭಾವನಾತ್ಮ ತೊಳಲಾಟ ಮೊದಲಾದ ಸಮಸ್ಯೆಗಳ ಸಂದರ್ಭ ಉಚಿತವಾಗಿ ಸಮಾಲೋಚನೆ ಹಾಗೂ ಅಗತ್ಯ ಚಿಕಿತ್ಸೆಗಳನ್ನು ಒದಗಿಸುವ ನಿಟ್ಟಿನಲ್ಲಿ ದೇಶದಲ್ಲಿಯೇ ಪ್ರಥಮವಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಈ ಋತುತಾರೆ ಯೋಜನೆಯನ್ನ ಕೈಗೆತ್ತಿಕೊಂಡಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

“ಪ್ರಾಯೋಗಿಕವಾಗಿ ದ.ಕ. ಜಿಲ್ಲೆಯಲ್ಲಿ ಈ ಯೋಜನೆಯನ್ನು ಡಿಸೆಂಬರ್ 2ನೆ ವಾರದಲ್ಲಿ ಆರಂಭಿಸುವ ಸಾಧ್ಯತೆ ಇದ್ದು ಇದಕ್ಕಾಗಿ ಆಶಾ ಕಾರ್ಯಕರ್ತೆರಿಯರಿಗೆ ತರಬೇತಿ ನೀಡುವ ಕಾರ್ಯವನ್ನು ನಡೆಸಲಾಗುತ್ತದೆ. ತರಬೇತಿಯ ಬಳಿಕ ಆಶಾ ಕಾರ್ಯಕರ್ತೆಯರು ಸಮೀಕ್ಷೆ ನಡೆಸಿ, ಅಗತ್ಯ ಇರುವವರಿಗೆ ಸಂಜೀವಿನಿ ಟೆಲಿ ಕನ್ಸೆಲ್ಟೆನ್ಸಿ ಮೂಲಕ ಸಮಾಲೋಚನೆಗೆ ಅವಕಾಶ ಒದಗಿಸಲಾಗುತ್ತದೆ. 100 ದಿನಗಳ ಅಭಿಯಾನದ ಮೂಲಕ ಈ ಋತುತಾರೆ ಯೋಜನೆಯ ವರದಿಯ ಆಧಾರದಲ್ಲಿ ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸುವ ಸಾಧ್ಯತೆ ಇದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪಿಯುಸಿ ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ 450 ಉದ್ಯೋಗಾವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ...

‘ಹೋ, ಅದು ನಿಮ್ಮ ಮಡಿಲೇ?’ — ಅದಾನಿ ಸಮೂಹದ ಲೀಗಲ್ ನೋಟಿಸ್‌ಗೆ ವ್ಯಂಗ್ಯವಾಗಿ ಮೊಯಿತ್ರಾ ತಿರುಗೇಟು

ಸಾಮಾಜಿಕ ಜಾಲತಾಣ 'ಎಕ್ಸ್' (ಹಿಂದಿನ ಟ್ವಿಟರ್) ನಲ್ಲಿ ಹಂಚಿಕೊಂಡ ವ್ಯಂಗ್ಯಚಿತ್ರವೊಂದಕ್ಕೆ ಸಂಬಂಧಿಸಿದಂತೆ...

ಮಹಿಳೆಯ ವೇಷದಲ್ಲಿ ನೆರವಿನ ನಾಟಕ: ದೆಹಲಿಯಲ್ಲಿ ವಿಚಿತ್ರ ದರೋಡೆ ಜಾಲ ಭೇದಿಸಿದ ಪೊಲೀಸರು

ನಸುಕಿನ ವೇಳೆ ನಿರ್ಜನ ರಸ್ತೆಗಳಲ್ಲಿ ಮಹಿಳೆಯ ವೇಷ ಧರಿಸಿ ನೆರವಿಗಾಗಿ ಕೈಬೀಸಿ...

ತಳ ಸಮುದಾಯಗಳ ಹೋರಾಟಕ್ಕೆ ಅಹಿಂದ ಒಂದೇ ವೇದಿಕೆಯಾಗಲಿ: ಡಾ. ಭೀಮಣ್ಣ ಮೇಟಿ

ಸಮಾಜದಲ್ಲಿ ಶತಮಾನಗಳಿಂದ ಶೋಷಣೆ ಮತ್ತು ಅಸಮಾನತೆಯನ್ನು ಎದುರಿಸುತ್ತಿರುವ ಸಮುದಾಯಗಳಿಗೆ ರಾಜಕೀಯ, ಸಾಮಾಜಿಕ...