ದಕ್ಷಿಣ ಕನ್ನಡ | 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆಯ ಉಪನಿರ್ದೇಶಕಿ

Date:

ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ. ನಿವೃತ್ತಿ ಅರಣ್ಯ ಅಧಿಕಾರಿ ಪರಮೇಶ್ವರ್ ಎನ್‌ ಪಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತರು ದಾಳಿ ಮಾಡಿದ್ದು, ಲಂಚ ಸ್ವೀಕರಿಸುವಾಗಲೇ ಭಾರತಮ್ಮನನ್ನು ಶನಿವಾರ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಸದ್ಯ ಇಲಾಖೆಯಿಂದ ನಿವೃತ್ತರಾಗಿರುವ ಪರಮೇಶ್ವರ್ ಎನ್‌ ಪಿ ಅವರು ಕರ್ತವ್ಯದ ವೇಳೆ 2022-23 ಮತ್ತು 2023-24ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ ‘ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ’ ಯೋಜನೆಯಡಿ ಸಜಿಪ ಮುನ್ನೂರು, ಸಜಿಪ ಮೂಡ, ಸಜಿಪ ಪಡು, ಸಜಿಪ ನಡು, ಕುರ್ನಾಡು, ನರಿಂಗಾನ ಬಾಳೆಪುಣಿ, ಮಂಜನಾಡಿ ಗ್ರಾಮಗಳ ಸಾರ್ವಜನಿಕರರಿಗೆ ಸರ್ಕಾರದ ವತಿಯಿಂದ 50 ಲಕ್ಷ ರೂ. ಮೌಲ್ಯದ ಹಲವು ಜಾತಿಯ ಅರಣ್ಯ ಮತ್ತು ತೋಟಗಾರಿಕಾ ಸಸಿಗಳನ್ನು ಉಚಿತವಾಗಿ ಸರಬರಾಜು ಮತ್ತು ನಾಟಿ ಕಾಮಗಾರಿ ಮಾಡಿಸಿದ್ದರು.

ತೋಟಗಾರಿಕಾ ಸಸಿಗಳನ್ನು ಕಣ್ಣನ್ ನರ್ಸರಿ ಮಾಲಕ ಧೋರಿ, ಶಬರೀಶ್ ನರ್ಸರಿಯ ಭೈರೇಗೌಡ ಮುಂತಾದವರಿಂದ ಈ ಸಸಿಗಳನ್ನು ಪಡೆಯಲಾಗಿತ್ತು. ಅವರಿಗೆ ನೀಡಬೇಕಾದ 18 ಲಕ್ಷ ರೂ. ಮತ್ತು ಅರಣ್ಯ ಗುತ್ತಿಗೆದಾರರಿಂದ ನಾಟಿ ಮಾಡಿಸಿದ್ದ 32 ಲಕ್ಷ ರೂ. ಕೊಡಲು ಬಾಕಿಯಿತ್ತು.

ಈ ನರ್ಸರಿಯ ಮಾಲೀಕರು ಮತ್ತು ಗುತ್ತಿಗೆದಾರರಿಗೆ ಕೊಡಲು ಬಾಕಿಯಿದ್ದ 50 ಲಕ್ಷ ರೂ.ನಗದನ್ನು ನೀಡಲು ಪರಮೇಶ್ವರ್ ಎನ್‌ ಪಿ ಅವರು ಅಕ್ಟೋಬರ್‌ 4 ರಂದು ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಮ್ಮರನ್ನು ಭೇಟಿ ಮಾಡಿ ಹೇಳಿದ್ದರು. ʼಬಿಲ್‌ನ ಮೊತ್ತ ಪಾವತಿಸಬೇಕಾದರೆ ತನಗೆ ಶೇ.15ರಷ್ಟು ಕಮೀಷನ್ ನೀಡಬೇಕು. ಇಲ್ಲದಿದ್ದರೆ ಬಿಲ್ ಪಾವತಿ ಮಾಡುವುದಿಲ್ಲʼ ಎಂದು ಭಾರತಮ್ಮ ಹೇಳಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

ಅಕ್ಟೋಬರ್‌ 20ರಂದು ಉಪನಿರ್ದೇಶಕರ ಕಚೇರಿಗೆ ತೆರಳಿ ಬಿಲ್ ಬಗ್ಗೆ ಮಾತನಾಡಿದಾಗ 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಮುಂದಿಟ್ಟರು ಎನ್ನಲಾಗಿದೆ. ಅದರಂತೆ ಅಕ್ಟೋಬರ್ 21ರಂದು ಕಚೇರಿಯಲ್ಲಿ 1 ಲಕ್ಷ ರೂ.‌ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೆಯೇ ಸಾಕ್ಷಿ ಸಹಿತ ಉಪನಿರ್ದೇಶಕಿಯನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್‌ಪಿ ಸಿ ಎ ಸೈಮನ್, ಡಿವೈಎಸ್‌ಪಿಗಳಾದ ಕಲಾವತಿ ಮತ್ತು ಚಲುವರಾಜು ಬಿ, ಇನ್ಸ್‌ಪೆಕ್ಟರ್ ಸುರೇಶ್ ಕುಮಾರ್ ಪಿ ಇದ್ದರು.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....