ದಕ್ಷಿಣ ಕನ್ನಡ | ಸರಣಿ ಅಪಘಾತ; ಹಲವರಿಗೆ ಸಣ್ಣಪುಟ್ಟ ಗಾಯ

Date:

Advertisements

ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪುವಿನಲ್ಲಿ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಗುದ್ದಿ, ಅದರ ಹಿಂಭಾಗಕ್ಕೆ ವ್ಯಾಗನಾರ್ ಕಾರು ಗುದ್ದಿ, ಅದಕ್ಕೆ ಬಸ್ಸು ಗುದ್ದಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆಯುವ ಸಂದರ್ಭವೇ ಅದರ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕಂದಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ ಪ್ರಯಾಣಿಕರು ಪಾರು

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಇತರ ವಾಹನಗಳಲ್ಲಿದ್ದ ಐದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೇಣೂರು | ನಿಯಂತ್ರಣ ತಪ್ಪಿ ಥಾರ್ ವಾಹನಕ್ಕೆ ಗುದ್ದಿದ ಖಾಸಗಿ ಬಸ್: ಜೀಪ್ ಚಾಲಕನಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಥಾರ್...

ಮಂಗಳೂರು | ಜಿಎಸ್‌ಟಿ ಕಡಿತಕ್ಕೆ ಬಿಜೆಪಿ ಸಂಭ್ರಮಾಚರಣೆ ಮಾಡುವ ಅಗತ್ಯವಿಲ್ಲ: ಶಾಸಕ ಮಂಜುನಾಥ್‌ ಭಂಡಾರಿ

ಕೇಂದ್ರ ಬಿಜೆಪಿ ಸರ್ಕಾರ ಜಿಎಸ್‌ಟಿ ಜಾರಿಗೆ ತಂದು ಜನಸಾಮಾನ್ಯರಿಗೆ ಈಗಾಗಲೇ ಸಾಕಷ್ಟು...

ಮಂಗಳೂರು | ಕೆಲಸ ನಿರಾಕರಣೆ; ಪ್ರತಿಭಟನೆಗಿಳಿದ ಹಳೆ ಬಂದರು ಹಮಾಲಿ ಕಾರ್ಮಿಕರು

ಮಂಗಳೂರಿನ ಹಳೆ ಬಂದರು ಸಗಟು ಮಾರುಕಟ್ಟೆಯ ಪಂಚಮಹಲ್ ವಾಸುದೇವ ಕಾಮತ್ ಎಂಬ...

Download Eedina App Android / iOS

X