ದಕ್ಷಿಣ ಕನ್ನಡ | ಸರಣಿ ಅಪಘಾತ; ಹಲವರಿಗೆ ಸಣ್ಣಪುಟ್ಟ ಗಾಯ

Date:

ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪುವಿನಲ್ಲಿ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಗುದ್ದಿ, ಅದರ ಹಿಂಭಾಗಕ್ಕೆ ವ್ಯಾಗನಾರ್ ಕಾರು ಗುದ್ದಿ, ಅದಕ್ಕೆ ಬಸ್ಸು ಗುದ್ದಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆಯುವ ಸಂದರ್ಭವೇ ಅದರ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕಂದಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ ಪ್ರಯಾಣಿಕರು ಪಾರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಇತರ ವಾಹನಗಳಲ್ಲಿದ್ದ ಐದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಮುಖಂಡನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ...

ಅಕ್ರಮ ಕಲ್ಲುಕೋರೆ: ಬಿಜೆಪಿ ಮುಖಂಡನ ಬಂಧನ; ಠಾಣೆಗೆ ನುಗ್ಗಿ ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ!

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷನನ್ನು ಪೊಲೀಸರು...

ಕರಾವಳಿಯ ಖಡಕ್ ಧ್ವನಿಯಾಗಿದ್ದ ವಸಂತ ಬಂಗೇರ

ಕರಾವಳಿಯ ಅಪ್ಪಟ ಸೆಕ್ಯೂಲರ್ ಧ್ವನಿ, ನೇರ ನಡೆ ನುಡಿಯ ಬೆಳ್ತಂಗಡಿಯ ಮಾಜಿ...