ದಕ್ಷಿಣ ಕನ್ನಡ | ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ; ತರಗತಿಗಳು ವಿಳಂಬ

Date:

ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಜಿಎಫ್‌ಜಿಸಿ) ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಒಂದು ತಿಂಗಳ ಹಿಂದೆಯೇ ಶೈಕ್ಷಣಿಕ ವರ್ಷ ಪ್ರಾರಂಭವಾಯಿತು. ಆದರೆ, ಶಿಕ್ಷಕರ ಕೊರತೆಯಿಂದ ಈವರೆಗೆ ಪಾಠ ಪ್ರವಚನಗಳು ಆರಂಭವಾಗಿಲ್ಲ. ಸುಮಾರು 37 ಜಿಎಫ್‌ಜಿಸಿಗಳಿಗೆ ಸುಮಾರು 700 ಮಂದಿ ಅತಿಥಿ ಬೋಧಕರ ಅಗತ್ಯವಿದೆ. ಸರ್ಕಾರವು ಅತಿಥಿ ಬೋಧಕರನ್ನು ನೇಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಎಲ್ಲವೂ ಸರಿಯಾಗಿ ನಡೆದರೆ, ಅಕ್ಟೋಬರ್ 1 ರಿಂದ ಈ ಕಾಲೇಜುಗಳಲ್ಲಿ ಬೋಧನೆಯನ್ನು ಪ್ರಾರಂಭಿಸಬಹುದೆಂಬುದು ಸ್ಥಳೀಯ ಶಿಕ್ಷಕರ ಅಭಿಪ್ರಾಯ.

“ನಮ್ಮ ಕಾಲೇಜಿನಲ್ಲಿ ಶೇ.40ರಷ್ಟು ಕಾಯಂ ಬೋಧಕರಿದ್ದಾರೆ, ಉಳಿದವರು ಅತಿಥಿ ಬೋಧಕರು. ಸಿಬ್ಬಂದಿ ಕೊರತೆಯಿಂದ ತರಗತಿಗಳನ್ನು ತೆಗೆದುಕೊಳ್ಳುವುದು ಎಷ್ಟು ಕಷ್ಟ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು” ಎಂದು ಮಂಗಳೂರಿನ ಕಾರ್‌ಸ್ಟ್ರೀಟ್‌ನ ಡಾ. ಪಿ ದಯಾನಂದ ಪೈ-ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕರೊಬ್ಬರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಪರಿಸ್ಥಿತಿಯನ್ನು ನಿಭಾಯಿಸಲು, ಬಲ್ಮಠದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ವಿಭಾಗಗಳನ್ನು ಒಂದೇ ತರಗತಿಯಾಗಿ ಸಂಯೋಜಿಸಲಾಗುತ್ತಿದೆ” ಎಂದು ಬೋಧಕ ಸಿಬ್ಬಂದಿಯೊಬ್ಬರು ಹೇಳಿದರು.

“ಸಿಬ್ಬಂದಿ ಲಭ್ಯವಿಲ್ಲದ ಕಾರಣ ದಿನಕ್ಕೆ 2ರಿಂದ 3 ಗಂಟೆಗಳ ಕಾಲ ಮಾತ್ರ ತರಗತಿಗಳು ನಡೆಯುತ್ತಿವೆ” ಎಂದು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

“ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜುಗಳು ಈಗಾಗಲೇ ಆಗಸ್ಟ್ 23 ರಿಂದ ಪುನರಾರಂಭಗೊಂಡಿದ್ದು, ಅತಿಥಿ ಬೋಧಕರ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿವೆ. ಅತಿಥಿ ಉಪನ್ಯಾಸಕರನ್ನು 10 ತಿಂಗಳಿಗೆ ಅಥವಾ ವಿಶ್ವವಿದ್ಯಾಲಯದ ಕೊನೆಯ ಕೆಲಸದ ದಿನದವರೆಗೆ ನೇಮಕ ಮಾಡಲಾಗುತ್ತದೆ. ದಾವಣಗೆರೆ ವಿಶ್ವವಿದ್ಯಾಲಯದ ಅಡಿಯಲ್ಲಿನ ಕಾಲೇಜುಗಳೂ ಕಳೆದ ವಾರ ಆಗಸ್ಟ್‌ನಲ್ಲಿ ಆರಂಭವಾಗಿವೆ. ಆದರೆ ಇತರ ವಿಶ್ವವಿದ್ಯಾಲಯಗಳಲ್ಲಿ, ಪರೀಕ್ಷೆಗಳು ಅಥವಾ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಮಂಗಳೂರು ವಿವಿ ಹಾಗೂ ದಾವಣಗೆರೆ ವಿವಿ ವ್ಯಾಪ್ತಿಯ ಕಾಲೇಜುಗಳು ಸಮಸ್ಯೆ ಎದುರಿಸುವಂತಾಗಿದೆ” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷ ಧೀರಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

“ಕಲ್ಯಾಣ ಕರ್ನಾಟಕ ಮೀಸಲಾತಿ ಸಮಸ್ಯೆ ಇಲ್ಲದಿದ್ದರೆ ಈ ವೇಳೆಗಾಗಲೇ ಅತಿಥಿ ಉಪನ್ಯಾಸಕರ ನೇಮಕಾತಿ ಪೂರ್ಣಗೊಳ್ಳುತ್ತಿತ್ತು. ಇದೀಗ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಮರು ನಿಗದಿಪಡಿಸಿದೆ. ಈ ಹಿಂದೆ, ಸೆಪ್ಟೆಂಬರ್ ಮೊದಲ ವಾರದಲ್ಲಿ ಅರ್ಜಿಗಳನ್ನು ಕೋರಲಾಗಿತ್ತು. ಬೋಧಕರು ಸೆಪ್ಟೆಂಬರ್ 16ರೊಳಗೆ ಸೇರಬೇಕಾಗಿತ್ತು. ಇದೀಗ ಸೆಪ್ಟೆಂಬರ್ 28ರೊಳಗೆ ಕೌನ್ಸೆಲಿಂಗ್ ನಡೆಯಲಿದ್ದು, ಅಕ್ಟೋಬರ್ ಮೊದಲ ವಾರದಿಂದ ಬೋಧಕರು ಕೆಲಸಕ್ಕೆ ಹಾಜರಾಗಲಿದ್ದಾರೆ” ಎಂದು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ದೇವಿಪ್ರಸಾದ್ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಇನ್ನಷ್ಟು ಆಳಕ್ಕೆ ಹೋಗಿದ್ದರೆ ಭಾರತದ ಸಮಸ್ಯೆಯಾದರೂ ತಿಳಿಯುತ್ತಿತ್ತು: ನಟ ಪ್ರಕಾಶ್ ರೈ

ಕಲಾವಿದ ಮೌನವಾದರೆ ಸಮಾಜವೇ ಮೌನವಾಗುತ್ತದೆ: ಪ್ರಕಾಶ್ ರೈ ಮಂಗಳೂರಿನ ತೊಕ್ಕೊಟ್ಟಿನ...

ಉಡುಪಿ‌ | ಸಮಾಜದ ತೊಡಕು ತೊಡೆಯುವ ವೇದಿಕೆ ರಂಗಭೂಮಿ: ದಿನೇಶ್ ಎಂ ಕೊಡವೂರು

ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ...

ಕೊಡಗು | ನಾಗರಹೊಳೆಯ ನಿವೃತ್ತ ಅರಣ್ಯಾಧಿಕಾರಿ ಚಿನ್ನಪ್ಪ ನಿಧನ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ, ಅರಣ್ಯ...

ಮಂಗಳೂರು | ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನ, ಅಂಗಾಗ ದಾನ ಪ್ರತಿಜ್ಞೆ ಮಾಡಿದ ಕಾರ್ಯಕರ್ತರು

ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು, ಅಂಗಾಗ ದಾನ ಮಾಡುವ...