ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

Date:

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ ಸಂಚಾರ ವ್ಯವಸ್ಥೆ ನಿರ್ವಹಣೆಗೆ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಸೂಚಿಸಿದ್ದಾರೆ.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಸೇರಿದಂತೆ ಹಲವೆಡೆ ಪದೇ ಪದೇ ಅಪಘಾತವಾಗಿ ಜೀವಹಾನಿ ಆಗುವ ಘಟನೆಗಳು ನಡೆಯುತ್ತಿದ್ದು, ಇಂತಹ ಸ್ಥಳಗಳಲ್ಲಿ ವೇಗ ನಿಯಂತ್ರಣ, ಟ್ರಾಫಿಕ್ ಸಿಗ್ನಲ್, ಸೂಚನಾ ಫಲಕ ಸೇರಿದಂತೆ ವಿವಿಧ ಸಂಚಾರಿ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಈ ಸ್ಥಳಗಳಲ್ಲಿ ತಾತ್ಕಾಲಿಕ ಕ್ರಮ ಕೈಗೊಳ್ಳುವುದಲ್ಲದೆ ಭವಿಷ್ಯದ ದೃಷ್ಟಿಯಿಂದ ಶಾಶ್ವತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ” ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಲವೆಡೆ ರಾತ್ರಿ ವೇಳೆ ಬೀದಿ ದೀಪವಿಲ್ಲದೆ ವಾಹನ ಅಪಘಾತಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಹೆದ್ದಾರಿಗಳಲ್ಲಿ ವಿದ್ಯುತ್ ದೀಪ ಅಳವಡಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ 42 ಪ್ರಮುಖ ಅಪಘಾತ ಸ್ಥಳ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

2025-26 ರಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಿಧ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಬಗ್ಗೆ 2604 ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಟಿಂಟೆಡ್ ಗ್ಲಾಸ್ ಅಳವಡಿಸಿದ 33,703 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, 2025 ರಲ್ಲಿ 73.89 ಲಕ್ಷ ಹಾಗೂ 2026 ರಲ್ಲಿ 75.88 ಲಕ್ಷ ದಂಡ ವಸೂಲು ಮಾಡಲಾಗಿದೆ. ಕರ್ಕಶ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ 2,805 ಪ್ರಕರಣ ದಾಖಲಿಸಿ 2026 ರಲ್ಲಿ 8.38 ಲಕ್ಷ ಹಾಗೂ 2025 ರಲ್ಲಿ 7.44 ಲಕ್ಷ ದಂಡ ವಸೂಲು ಮಾಡಲಾಗಿದೆ.

ಶಾಲಾ ವಾಹನದಲ್ಲಿ ಮಿತಿಮೀರಿ ಮಕ್ಕಳನ್ನು ಸಾಗಿಸಿದ 974 ಪ್ರಕರಣ ದಾಖಲಿಸಲಾಗಿದೆ. ಮೀನು ಸಾಗಾಟ ವಾಹನಗಳಲ್ಲಿ ತ್ಯಾಜ್ಯ ನೀರನ್ನು ರಸ್ತೆಗೆ ಚೆಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2026 ರಲ್ಲಿ 535 ಪ್ರಕರಣ ದಾಖಲಿಸಿ, 2.65 ಲಕ್ಷ ದಂಡ ವಸೂಲು ಮಾಡಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆರ್.ಟಿ. ಓ ಇಲಾಖೆಗಳು ಈ ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲು ಎಸ್.ಪಿ ಸೂಚಿಸಿದರು.

ರಸ್ತೆ ಅಪಘಾತ ನಡೆಸಿ ಜೀವಹಾನಿಗೆ ಕಾರಣವಾದ 279 ಪ್ರಕರಣಗಳಲ್ಲಿ 538 ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಡಿಸಿಪಿ ರವಿಶಂಕರ್, ಎ.ಸಿ.ಪಿ ನಜ್ಮಾ ಫಾರೂಕಿ, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯಕ್, ಆರ್.ಟಿ.ಓ ಅಧಿಕಾರಿ ಮುರಗೇಂದ್ರ ಬಿ ಶಿರೋಳ್ಕರ್ ಮತ್ತಿತ್ತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್...