ಮಂಗಳೂರು | ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು.

- Advertisement -

ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚಿಸಿದರು. ಈ ಬಗ್ಗೆ ಕೂಡಲೇ ಪ್ರತೀ ತಾಲೂಕಿನಿಂದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ವರದಿ ನೀಡುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರತೀ ತಿಂಗಳು 1 ನೇ ಮತ್ತು 3ನೇ ಶನಿವಾರದಂದು ಆಯೋಜಿಸುವ ʼಸ್ವಚ್ಛ ಶನಿವಾರʼ ಸ್ವಚ್ಛತಾ ಕಾರ್ಯದಂದು ಗ್ರಾಮ ಪಂಚಾಯತ್‍ಗಳು ತಮ್ಮ ವ್ಯಾಪ್ತಿಯ ಎಲ್ಲಾ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು. ಸ್ವಚ್ಛ ಸಂಕೀರ್ಣ ಹೊಂದಿರದ 63 ಗ್ರಾಮ ಪಂಚಾಯತ್‍ಗಳಲ್ಲಿ ಘಟಕ ನಿರ್ಮಾಣದ ಬಗ್ಗೆ ತಾಲೂಕು ಪಂಚಾಯತ್ ಅನಿಬರ್ಂಧಿತ ನಿಧಿ ಮತ್ತು ಗ್ರಾಮ ಪಂಚಾಯತ್‍ಗಳಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿ ಕನಿಷ್ಟ 1000 ಚದರ ಅಡಿ ವಿಸ್ತೀರ್ಣದ ಘಟಕ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸುವಚಿತೆ ಅವರು ಸೂಚಿಸಿದರು.

ನೈರ್ಮಲ್ಯ ತ್ಯಾಜ್ಯ ನಿರ್ವಹಣೆಗಾಗಿ ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯತ್‍ಗಳನ್ನು ಗುರುತಿಸಲಾಗಿದ್ದು, ಇವುಗಳಲ್ಲಿ ತ್ಯಾಜ್ಯ ನಿರ್ವಹಣಾ ಸಂಸ್ಥೆಯೊಂದಿಗೆ 48 ಗ್ರಾಮ ಪಂಚಾಯತ್‍ಗಳು ಕೂಡಲೇ ಒಪ್ಪಂದ ಮಾಡಿಕೊಳ್ಳಬೇಕು. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಈಗಾಗಲೇ ಹೊರಡಿಸಲಾಗಿರುವ ಸುತ್ತೋಲೆಯಂತೆ ಗ್ರಾಮ ಪಂಚಾಯತ್‍ಗಳಲ್ಲಿ ಈ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಮಾರಾಟ, ವಿತರಣೆ ಮಾಡುವುದರ ನಿಯಂತ್ರಣಕ್ಕಾಗಿ ಪರಿಶೀಲನೆ, ದಾಳಿ ನಡೆಸಿ ದಂಡ ವಿಧಿಸಲು ಮತ್ತು ಪರ್ಯಾಯ ವಸ್ತುಗಳ ಬಳಕೆಯನ್ನು ಹೆಚ್ಚಿಸಲು ಕ್ರಮವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಬೇಕು. ಈ ಬಗ್ಗೆ ದಂಡ ಸಂಗ್ರಹಣೆಗಾಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತ್‍ಗಳಿಗೆ ಗುರಿ ನಿಗದಿಪಡಿಸಿ, ಸಂಗ್ರಹಣೆಯಾದ ದಂಡ ವಿಧಿಸಲು ಸೂಚಿಸಿದರು.

ಸಭೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ಯೋಜನಾ ಅಧಿಕಾರಿ ಇ. ಜಯರಾಮ್ , ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್ , ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು, ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...