ಧರ್ಮಸ್ಥಳ: ಕಾಡಿನಲ್ಲಿ ಮೂಳೆಗಳು, 7 ತಲೆ ಬುರುಡೆ ಪತ್ತೆ

Date:

Advertisements

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಒಟ್ಟು 7 ತಲೆಬುರುಡೆಗಳು ಹಾಗೂ ಬಹಳಷ್ಟು ಮೂಳೆಗಳು ನೆಲದ ಮೇಲೆ ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಎಸ್‌ಐಟಿಯವರು ಬುಧವಾರ ಹಾಗೂ ಗುರುವಾರ ಕಾಡಿನಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಒಟ್ಟು 9 ಕಡೆ ಮೃತದೇಹಗಳ ಅವಶೇಷಗಳು ಕಂಡುಬಂದಿದ್ದವು. ಅವುಗಳ ಪೈಕಿ ಐದು ಸ್ಥಳಗಳಲ್ಲಿ ಸಿಕ್ಕಿದ್ದ ಐದು ತಲೆ ಬುರುಡೆಗಳು ಹಾಗೂ ನೂರಾರು ಮೂಳೆಗಳನ್ನು ಬುಧವಾರವೇ ಎಸ್‌ಐಟಿ ವಶಕ್ಕೆ ಪಡೆದಿತ್ತು. ಗುರುವಾರ ಇನ್ನುಳಿದ ಕಡೆಗಳಲ್ಲಿದ್ದ ಎರಡು ತಲೆಬುರುಡೆಗಳು ಹಾಗೂ ಮೂಳೆಗಳನ್ನು ವಶಕ್ಕೆ ಪಡೆದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್ಐಟಿಯವರು ಕಾಡಿನೊಳಕ್ಕೆ ತೆರಳಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಹೊರ ಬಂದರು. ಎಸ್‌ಐಟಿಯ ಎಸ್‌ಪಿಗಳಾದ ಜಿತೇಂದ್ರ ಕುಮಾರ್ ದಯಾಮ, ಸಿ.ಎ.ಸೈಮನ್‌, ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಬೆಳ್ತಂಗಡಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ದಿನದ ಶೋಧ ಕಾರ್ಯ ಪೂರ್ಣಗೊಂಡಿದೆ. ಬೇರೆ ಕಡೆ ನಾಳೆಯೂ ಶೋಧ ಕಾರ್ಯ ಮುಂದುವರಿಸಲಾಗುತ್ತದೆಯೋ ಇಲ್ಲವೋ ಎಂಬ ಬಗ್ಗೆ ಎಸ್‌ಐಟಿ ಸುಳಿವು ಬಿಟ್ಟುಕೊಟ್ಟಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X