ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ವ್ಯಕ್ತಿ ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ.
ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ ಈ ಕೃತ್ಯ ಎಸಗಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡಿದೆ. ಆದ್ದರಿಂದ ಸಾಕ್ಷಿ ನೀಡಲು ಮುಂದಾಗಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ದೂರನ್ನು ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್‌ಐಆರ್ ದಾಖಲು
Big Breaking News
— eedina.com ಈ ದಿನ.ಕಾಮ್ (@eedinanews) July 11, 2025
ಧರ್ಮಸ್ಥಳ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಪೋಲಿಸ್ ರಕ್ಷಣೆ ಸಹಿತ ಬೆಳ್ತಂಗಡಿ ಕೋರ್ಟ್ ಗೆ ವಕೀಲರ ನಿಯೋಗದೊಂದಿಗೆ ಹಾಜರು.
ಕೈಯಲ್ಲಿ ಕಪ್ಪು ಬಣ್ಣದ ಬ್ಯಾಗ್ ಕೂಡ ತಂದಿರುವ ವ್ಯಕ್ತಿ pic.twitter.com/UEN7uHQh4Y
ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.
ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇಂದು(ಜುಲೈ 11) ದೂರುದಾರ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ. ದೂರುದಾರರ ಮನವಿಯಂತೆ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ. ಇನ್ನು ಅನಾಮಧೇಯ ದೂರುದಾರರ ಕೈಯಲ್ಲಿ ಕಪ್ಪು ಬ್ಯಾಗ್ ಕಾಣಿಸಿಕೊಂಡಿದ್ದು, ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಇನ್ನು “ತಾನು ವಿದ್ಯಾವಂತನಲ್ಲದ ಕಾರಣ ಕಾನೂನು ಪ್ರಕ್ರಿಯೆಗಳ ಬಗ್ಗೆ ತಿಳಿದಿಲ್ಲ. ಹಾಗಾಗಿ ಕೋರ್ಟ್‌ನಲ್ಲಿ ಹೇಳಿಕೆ ನೀಡುವಾಗ ತನ್ನೊಂದಿಗೆ ತನ್ನ ವಕೀಲರೂ ಇರಬೇಕು ದೂರುದಾರರು ಮನವಿ ಮಾಡಿದ್ದರು. ಆದರೆ ಕೋರ್ಟ್ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ” ಎಂದು ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶ್‌ಪಾಂಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
