ಧರ್ಮಸ್ಥಳ ಪ್ರಕರಣ | ಅಸ್ಥಿಪಂಜರ ಪತ್ತೆಗಾಗಿ ನಾಲ್ಕನೇ ಜಾಗದಲ್ಲಿ ಮುಂದುವರೆದ ಕಾರ್ಯಾಚರಣೆ

Date:

ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇಂದು(ಜುಲೈ 30) ಮೂರನೇ ಸ್ಥಳವನ್ನು ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ದೊರಕಿಲ್ಲ. ನೇತ್ರಾವತಿ ಸ್ನಾನಗುಡ್ಡದ ಪಕ್ಕದ ಬಂಗ್ಲೆ ಗುಡ್ಡದಲ್ಲಿನ ಕಾಡಿನೊಳಗೆ ಗುರುತಿಸಿದ ಜಾಗಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

- Advertisement -

ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಮೊದಲನೇ ಸ್ಥಳವನ್ನು ಅಗೆಯುವ ಕಾರ್ಯಾಚರಣೆ ನಿನ್ನೆ ನಡೆದಿತ್ತು. ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಒಂದು ಬಟ್ಟೆ ತುಂಡು ಹಾಗೂ ಒಂದು ಬ್ಯಾಗ್ ಪತ್ತೆಯಾಗಿತ್ತು. ಆದರೆ ಇದ್ಯಾವುದೂ ಸದ್ಯದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳಾಗಿ ತೋರುವುದಿಲ್ಲ ಎಂದು ಉನ್ನತ ಮೂಲಗಳು ಈದಿನ ಡಾಟ್‌ ಕಾಂಗೆ ಖಚಿತಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಧರ್ಮಸ್ಥಳಕ್ಕೆ ಬಂದ ಬೇರೆ ಇತರೆ ಯಾತ್ರಿಕರ ವಸ್ತುಗಳು ಅವಾಗಿವೆ ಎಂದು ತಿಳಿದುಬಂದಿದೆ. ಗುರುತು ಮಾಡಲಾದ ನಾಲ್ಕನೇ ಜಾಗವನ್ನು ಈಗಾಗಲೇ ಅರ್ಧದಷ್ಟು ಅಗೆಯಲಾಗಿದೆ. ಇಂದು ಐದು ಅಥವಾ ಆರನೇ ಜಾಗವನ್ನು ಅಗೆಯುವುದು ಖಚಿತವಾಗಿದೆ. ಎಸ್ ಐಟಿ ಮುಖ್ಯಸ್ಥರಾದ ಪ್ರಣವ್ ಮೊಹಂತಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...