ಧರ್ಮಸ್ಥಳ ಪ್ರಕರಣ | ಎರಡನೇ ದಿನದ ಅಗೆತ ಕಾರ್ಯಾಚರಣೆ ಆರಂಭ

Date:

Advertisements

ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರು ತಾನು ಹೂತಿದ್ದ ನೂರಾರು ಕಳೇಬರಗಳನ್ನು ತೆಗೆಯುತ್ತೇನೆಂದು ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ ಹಾಗೂ ಸಹಾಯಕ ಪೊಲೀಸ್‌ ಆಯುಕ್ತರ ಸಮ್ಮುಖದಲ್ಲಿ ಎರಡನೇ ದಿನ ಅಗೆತ ಕಾರ್ಯಾಚರಣೆ ಆರಂಭಗೊಂಡಿದೆ.

ದೂರುದಾರನ ಜೊತೆ ಬಂದ ಎಸ್.ಐ.ಟಿ. ಕಾರ್ಯಾಚರಣೆ ನಡೆಸುತ್ತಿದೆ. ಎಸ್‌ಐಟಿ ಅಧಿಕಾರಿ ಅನುಚೇತ್‌ ಸೇರಿದಂತೆ ಹಲವಾರು ಅಧಿಕಾರಿಗಳು ಸ್ಥಳದಲ್ಲಿ ನಿಂತು ಅಗೆತ ಕಾರ್ಯವನ್ನು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಧರ್ಮಸ್ಥಳ ಸ್ನಾನಘಟ್ಟದಲ್ಲಿ ಮೊದಲ ದಿನ ಕಾರ್ಯಾಚರಣೆಯ ಮೊದಲ ಸ್ಥಳ ಅಗೆದಾಗ ಯಾವುದೇ ಕಳೇಬರ ದೊರಕಿರಲಿಲ್ಲ. ಸುಮಾರು ಹದಿನೈದು ವರ್ಷಗಳ ಹಿಂದೆ ನಡೆದಿವೆ ಎನ್ನಲಾದ ಪ್ರಕರಣಗಳನ್ನು ಬಯಲಿಗೆಳೆಯಲಾಗುತ್ತದೆಯೇ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಸ್ಥಳದಲ್ಲಿ ಮಳೆ ಶುರುವಾಗಿದ್ದು, ಅಧಿಕಾರಿಗಳು ಕೊಡೆಗಳನ್ನು ಹಿಡಿದು ಮಳೆಯ ನಡುವೆಯೇ ಕಾರ್ಯಾಚರಣೆ ಶುರು ಮಾಡಿದ್ದಾರೆ. ನಿನ್ನ ಕಾರ್ಯಾಚರಣೆ ನಡೆದ ಕಾಡಿನ ಜಾಗದ ಸ್ವಲ್ಪ ದೂರದಲ್ಲಿ ದೂರುದಾರ ಹೇಳಿದ ಸ್ಥಳ ಅಗೆಯಲು ಕಾರ್ಮಿಕರು ಮತ್ತು ದೂರುದಾರನೊಂದಿಗೆ ಎಸ್.ಐ.ಟಿ ತೆರಳಿದೆ.

ಇಲ್ಲಿಯವರೆಗೆ ತಾನು ದೇಹಗಳನ್ನು ಹೂತಿರುವ 20ಕ್ಕೂ ಹೆಚ್ಚು ಜಾಗಗಳನ್ನು ವ್ಯಕ್ತಿಯು ಎಸ್‌ಐಟಿ ತಂಡಕ್ಕೆ ತೋರಿಸಿದ್ದು ಅವುಗಳಿಗೆ ನಂಬರ್‌ ನೀಡಿ ಗುರುತು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X