ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

Date:

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

- Advertisement -

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

“ದಸರಾ ಸಂದರ್ಭದಲ್ಲಿ ಕುದ್ರೋಳಿಗೆ ಆಗಮಿಸುವಂತೆ ಬಹಳ ವರ್ಷಗಳಿಂದ ಜನಾರ್ದನ ಪೂಜಾರಿ ಅವರು ಆಹ್ವಾನ ನೀಡುತ್ತಲೇ ಇದ್ದರು. ಕಳೆದ ವರ್ಷ ಹಬ್ಬದ ಮಧ್ಯೆ ಬಂದಿದ್ದೆ. ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸಮಾಜಗಳು, ಸಮುದಾಯಗಳನ್ನು ಒಗ್ಗೂಡಿಸುವ ಕೆಲಸವಾಗುತ್ತಿದೆ. ನವರಾತ್ರಿಯಲ್ಲಿ ನವದುರ್ಗೆಯರಿಗೆ ಪ್ರಾರ್ಥಿಸಿ, ಸಾಂಸ್ಕೃತಿಕ ಬದುಕನ್ನು ಬಿಂಬಿಸಲಾಗುತ್ತಿದೆ” ಎಂದು ತಿಳಿಸಿದರು.

“ನಮ್ಮ ನಾಡ ಹಬ್ಬ ದಸರಾವನ್ನು ಮೈಸೂರಿನಲ್ಲಿ ಸರ್ಕಾರದ ಪರವಾಗಿ ಆಚರಿಸುತ್ತಿದ್ದೇವೆ. ಅ.21ರಂದು ವಿಜಯದಶಮಿಯಂದು ಕಾರ್ಯಕ್ರಮ ನಡೆಯಲಿದ್ದು, ತುಳುನಾಡಿನ ಪ್ರತಿನಿಧಿಗಳು ಕೂಡ ಆಗಮಿಸುತ್ತಿದ್ದಾರೆ. ಅನೇಕ ಹೊಸ ಕಾರ್ಯಕ್ರಮಗಳನ್ನು ಪರಿಚಯಿಸಲಾಗಿದ್ದು, ಪಥ ಸಂಚಲನದಲ್ಲಿ ನಮ್ಮ ಸೇನಾಪಡೆಗಳ ತಂಡಗಳು ಭಾಗವಹಿಸುತ್ತಿವೆ. ಈ ಬಾರಿ ಹೊಸ ಆನೆ ತಾಯಿ ಚಾಮುಂಡೇಶ್ವರಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದೆ” ಎಂದರು.

“ಕಂಬಳವನ್ನು ಮೈಸೂರಿಗೆ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದೆ. ವಿಜಯನಗರ ಕಾಲದಲ್ಲಿ ದಸರಾ ಸಂದರ್ಭದಲ್ಲಿ ಕೋಣಗಳನ್ನು ಕರೆದುಕೊಂಡು ಬರುತ್ತಿದ್ದರು ಎಂಬ ಇತಿಹಾಸ ತಿಳಿದಿದ್ದೇನೆ. ಇದು ನಿಮ್ಮ ಹಬ್ಬ, ರಾಜ್ಯದ ಹಬ್ಬ” ಎಂದರು.

ಎಸ್ಐಆರ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ

ಎಸ್ಐಆರ್ ವಿಚಾರವಾಗಿ ಮಾತನಾಡಿ, “ಎಸ್ಐಆರ್ ದತ್ತಾಂಶಗಳ ವಿಚಾರವಾಗಿ ಇಂದು ನಾವು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಮತದಾನದ ಹಕ್ಕು ಬದುಕಿನ ಹಕ್ಕು. ಅದಕ್ಕಾಗಿ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟ ಮುಂದುವರಿಸುತ್ತೇವೆ. ಪ್ರತಿಭಟನೆ ಮೆರವಣಿಗೆ ವೇಳೆ ರಾಹುಲ್ ಗಾಂಧಿ ಅವರು ನನಗೆ ವಾಹನದಲ್ಲಿ ಬರಲು ಹೇಳಿದ್ದನ್ನು ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ನಾಯಕರು ಇದು ದೊಡ್ಡ ಅಪಮಾನ ಎಂದು ಅಪಪ್ರಚಾರ ಮಾಡಿದರು. ನನ್ನನ್ನು ರಾಜ್ಯದ ಮುಖ್ಯಮಂತ್ರಿ ಮಾಡಿದ್ದೇ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು. ಅವರ ಸಹಕಾರದಿಂದ ನಾವು ರಾಜ್ಯದಲ್ಲಿ ಮತದಾರರ ಹಕ್ಕು ಸಂರಕ್ಷಿಸುತ್ತಿದ್ದೇವೆ. ಬಿಜೆಪಿ ನಾಯಕರು ಇದರಲ್ಲಿ ಅಪಪ್ರಚಾರ ಮಾಡಿ ರಾಜಕೀಯ ಲಾಭಕ್ಕೆ ಮುಂದಾಗಿದ್ದಾರೆ. ಇಂತಹ ಸಣ್ಣ ವಿಚಾರವನ್ನು ಲಾಭಕ್ಕೆ ಬಳಸಿಕೊಳ್ಳುವುದು ಬೇಡ. ರಾಹುಲ್ ಗಾಂಧಿ ಅವರು ಮಾನವೀಯತೆ ಹೊಂದಿರುವ ನಾಯಕ” ಎಂದು ತಿಳಿಸಿದರು.

ಸ್ಟಿಂಗ್ ವಿಚಾರದಲ್ಲಿ ಬಂಧನವಾಗಿರುವ ಬಗ್ಗೆ ಕೇಳಿದಾಗ, “ನನಗೆ ಮಾಹಿತಿ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...

ಗದಗ | ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ  ಮೀಸಲಾತಿ ಪ್ರಮಾಣ ಹೆಚ್ಚಿಸಿ: ಬಾಲು ರಾಠೊಡ್ ಆಗ್ರಹ

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ...

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...