ಸುಳ್ಳು ಸುದ್ದಿಗಳ ನಡುವೆ ಸತ್ಯವನ್ನು ಜನರಿಗೆ ತಲುಪಿಸುವ ಹೊಣೆ ಪತ್ರಿಕೋದ್ಯಮದ್ದು : ರೆವೆ. ಪ್ರೊ. ಡಾ. ಎಚ್.ಎಂ. ವಾಟ್ಸನ್

Date:

ಈ ದಿನ ಡಾಟ್‌ಕಾಮ್‌ ಪ್ರಕಟಿಸಿದ ʼಜೈ ಹಿಂದ್-ಜಯ ಕರ್ನಾಟಕʼ ವಿಶೇಷಾಂಕ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ರೆ. ಪ್ರೊ. ಡಾ. ಎಚ್.ಎಂ. ವಾಟ್ಸನ್, ಹೊಸ ಕನ್ನಡದ ಉದಯಕ್ಕೆ ಕಾರಣವಾದ ಕನ್ನಡ ಪತ್ರಿಕೋದ್ಯಮದ ನೆಲೆಯಲ್ಲೇ ಈದಿನ.ಕಾಮ್ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

- Advertisement -

ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆ ಅತ್ಯಂತ ಮುಖ್ಯ ಅಂಶವಾಗಿದೆ. ಇರುವ ವಿಷಯವನ್ನು ಇರುವಂತೆಯೇ ಹೇಳುವುದು ಪತ್ರಿಕೋದ್ಯಮದ ಧರ್ಮ. ಆದರೆ ಯಾವುದೇ ಬರಹ ಅಥವಾ ವರದಿ ಸಂಪೂರ್ಣ ತಟಸ್ಥ (ನ್ಯೂಟ್ರಲ್) ಆಗಿರುವುದಿಲ್ಲ. ಅದು ಒಂದು ನಿರ್ದಿಷ್ಟ ದೃಷ್ಟಿಕೋನದಿಂದಲೇ ರೂಪುಗೊಳ್ಳುತ್ತದೆ. ಆದ್ದರಿಂದ ನಾವು ಯಾವ ದೃಷ್ಟಿಕೋನದಿಂದ ಬರೆಯುತ್ತೇವೆ ಎಂಬುದು ಅತ್ಯಂತ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...
WhatsApp Image 2026 07 18 at 1.49.22 PM

ಈದಿನ.ಕಾಮ್ ಸಮಾಜದ ಅಂಚಿನಲ್ಲಿರುವ ಜನರ ದೃಷ್ಟಿಕೋನದಿಂದ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಈದಿನ.ಕಾಮ್ ಪ್ರಕಟಿಸುವ ಪುಸ್ತಕಗಳು ಕೇವಲ ಪುಸ್ತಕಗಳಾಗಿ ಉಳಿಯದೆ, ಸಮಾಜದ ವಿವಿಧ ವರ್ಗಗಳ ಜನರನ್ನು ತಲುಪಿ ಚಿಂತನೆಗೆ ಪ್ರೇರಣೆ ನೀಡಬೇಕು ಎಂದು ಹೇಳಿದರು.

ಇಂದಿನ ದಿನಗಳಲ್ಲಿ ನಾವು “ವಾಟ್ಸಪ್‌ ಯೂನಿವರ್ಸಿಟಿ” ಯುಗದಲ್ಲಿ ಬದುಕುತ್ತಿದ್ದೇವೆ. ಸತ್ಯ ಸುದ್ದಿಗಳಿಗಿಂತ ಸುಳ್ಳು ಸುದ್ದಿಗಳೇ ಹೆಚ್ಚು ವೇಗವಾಗಿ ಹರಡುತ್ತಿವೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದು ಸತ್ಯವೆಂಬ ಭ್ರಮೆ ಮೂಡುತ್ತದೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ದಾಖಲಿಸುವ ಬರಹಗಳು ಮತ್ತು ಜವಾಬ್ದಾರಿಯುತ ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಈ ಎರಡು ಮೌಲ್ಯಗಳನ್ನು ಅಳವಡಿಸಿಕೊಂಡು ಈದಿನ.ಕಾಮ್ ತನ್ನ ಪತ್ರಿಕೋದ್ಯಮ ಮತ್ತು ಪ್ರಕಟಣಾ ಕಾರ್ಯವನ್ನು ಮತ್ತಷ್ಟು ಯಶಸ್ವಿಯಾಗಿ ಮುಂದುವರಿಸಲಿ ಎಂದು ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...