ಡ್ರಗ್ಸ್‌ ದಂಧೆ | 123 ಕೆ.ಜಿ ಗಾಂಜಾ ವಶ, ಮೂವರ ಬಂಧನ

Date:

ದಕ್ಷಿಣ ಕನ್ನಡ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ ಭಾಗವಾಗಿ 123 ಕೆ.ಜಿ. ಗಾಂಜಾ ಮತ್ತು ಅದನ್ನು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

- Advertisement -

ಕೇರಳ ರಾಜ್ಯದ ಕಾಸರಗೋಡು ತಾಲೂಕಿನ ಮಸೂದ್ ಎಂ. ಕೆ (45), ಮೊಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್​ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆರೋಪಿಗಳು ಆಂಧ್ರಪ್ರದೇಶದಿಂದ ಗಾಂಜಾ ಸಾಗಿಸುತ್ತಿದ್ದರು. ಎರಡು ಕಾರುಗಳಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು, ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್​​ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾ ಸಮೇತ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಆರೋಪಿಗಳಿಂದ 123 ಕೆ.ಜಿ ಗಾಂಜಾ, ಎರಡು ಮತ್ತು 5 ಮೊಬೈಲ್ ಫೋನ್​​ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46,20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...