ಸುರತ್ಕಲ್ | ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ಆಹಾರ ಸುರಕ್ಷತಾ ತಂಡಗಳಿಂದ ದಿಢೀರ್ ದಾಳಿ

Date:

ರಾಜ್ಯ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಸೂಚನೆಯಂತೆ ಮಂಗಳೂರಿನ ಮುಕ್ಕ ಪ್ರದೇಶದಲ್ಲಿರುವ ಶ್ರೀನಿವಾಸ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡವು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್ ಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಪರಿಶೀಲಿಸಿದೆ. ತಂಡವು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್ ಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಪರಿಶೀಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...
Screenshot 2026 1110 163034

ಈ ಸಂದರ್ಭ ಕ್ಯಾಂಟೀನ್ ಹಾಗೂ ಅಡುಗೆ ಕೋಣೆಗಳಲ್ಲಿ ಆಹಾರ ಸಿದ್ಧಪಡಿಸಲು ಬಳಸಲಾಗುವ ಸಾಮಗ್ರಿಗಳ ಮಾದರಿಗಳನ್ನು ಮತ್ತು ಆಹಾರ ತಯಾರಿಸಲು ಬಳಸುವ ನೀರಿನ ಮಾದರಿಯನ್ನು ಸಂಗ್ರಹಿಸಿ ಗುಣಮಟ್ಟ ಪರಿಶೀಲನೆಗಾಗಿ ಆಹಾರ ಪ್ರಯೋಗ ಶಾಲೆಗಳಿಗೆ ಕಳಿಸಿಕೊಟ್ಟಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಗಳನ್ನು ತಪ್ಪದೇ ಪಾಲಿಸಲು ನಿರ್ದೇಶನ ನೀಡಲಾಗಿದ್ದು, ರೋಗಿಗಳಿಗೆ ಗುಣಮಟ್ಟದ, ಸುರಕ್ಷಿತ ಆಹಾರವನ್ನೇ ನೀಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಲ್ಲದೇ ಅಡುಗೆ ಮತ್ತು ಊಟ ಬಡಿಸುವ ಸಿಬ್ಬಂದಿ ಸ್ವಚ್ಛತೆ ಕಾಪಾಡಬೇಕು, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಅಧಿಕಾರಿಗಳು ಆದೇಶಿಸಿದ್ದಾರೆ.

ಇದೇ ಸಂದರ್ಭ ಮುಲ್ಕಿ ಮತ್ತು ಕಾರ್ನಾಡ್ ಭಾಗದ ಬೇಕರಿಗಳಲ್ಲೂ ಸಿಹಿ ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯ ತಪಾಸಣೆ ನಡೆಸಲಾಗಿದ್ದು, ಶುಚಿತ್ವ ಕಾಪಾಡದ ಬೇಕರಿಗಳಿಗೆ ನೋಟಿಸ್ ನೀಡಲಾಗಿದ ಮತ್ತು ಬಣ್ಣ ಬಳಸಿರುವ ಶಂಕೆ ಇರುವ ಸಿಹಿ ತಿಂಡಿಗಳನ್ನು ವಶಕ್ಕೆ ಪಡೆದು, ಸೀಲ್ ಮಾಡಿ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ತಕ್ಷಣ, ನಿಯಮ ಮೀರಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ ಬೂದಿಯ ಮಳೆ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು...

ಯುವಜನರಲ್ಲಿ ರಾಜಕೀಯ ಜಾಗೃತಿ ಮೂಡಿಸಲು ಜಾಗೃತ ಕರ್ನಾಟಕದಿಂದ ನ. 17ರಂದು ರಾಜ್ಯಮಟ್ಟದ ಭಾಷಣ ಸ್ಪರ್ಧೆ

ಯುವಜನರಲ್ಲಿ ರಾಜಕೀಯ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕತೆ, ಸಾಮಾಜಿಕ ಕಾಳಜಿ, ಸಂವಿಧಾನದ...

ದಕ್ಷಿಣ ಕನ್ನಡ | ವಜಾಗೊಂಡ ಮಹಿಳಾ ಗುತ್ತಿಗೆ ಕಾರ್ಮಿಕರೊಂದಿಗೆ ದೀಪಾವಳಿ ಆಚರಿಸಿದ ನಾಗರಿಕ ಹೋರಾಟ ಸಮಿತಿ

ಉದ್ಯೋಗದಿಂದ ವಜಾಗೊಂಡು ಸುರತ್ಕಲ್ ಬಾಳದಲ್ಲಿರುವ HPCL ಬಾರಿಸಿಟ್ಲಿಂಗ್ ಘಟಕದ ಮುಂಭಾಗ 70...