ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Date:

ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿರುವ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಈ ಕುರಿತು ಧರ್ಮಸ್ಥಳ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ದೂರು ನೀಡಿದ್ದು, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಗಿರೀಶ್ ಮಟ್ಟಣ್ಣವರ್ ಅವರು ಸತ್ಯಕ್ಕೆ ದೂರವಾದ ಗಂಭೀರ ಆರೋಪಗಳನ್ನು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ದೂರಿನ ಪ್ರಕಾರ, ಡಾ. ಹೆಗ್ಗಡೆಯವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಅವಹೇಳನಕಾರಿ ವಿಷಯಗಳನ್ನು ಹಂಚಲಾಗಿದ್ದು, ಸಮಾಜದಲ್ಲಿ ಅವರ ಗೌರವ ಮತ್ತು ಸ್ಥಾನಮಾನಕ್ಕೆ ಹಾನಿ ಉಂಟುಮಾಡುವ ಪ್ರಯತ್ನ ನಡೆದಿದೆ. ಅಲ್ಲದೆ, ಸಮಾಜದಲ್ಲಿ ವೈರತ್ವ, ದ್ವೇಷ ಮತ್ತು ವೈಮನಸ್ಸು ಸೃಷ್ಟಿಸುವ ಉದ್ದೇಶವೂ ಇದರಲ್ಲಿ ಅಡಕವಾಗಿದೆ ಎಂದು ಆರೋಪಿಸಲಾಗಿದೆ.

ಈ ದೂರಿನ ಅನ್ವಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS-2023ರ ಸೆಕ್ಷನ್ 353(2) ಅಡಿಯಲ್ಲಿ ಎಪ್ರಿಲ್ 18ರಂದು ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ತನಿಖೆಗೆ ಹಾಜರಾಗಲು ನೋಟಿಸ್

ಮೇ 7ರಂದು ಗಿರೀಶ್ ಮಟ್ಟಣ್ಣವರ್ ಎಸ್ಐಟಿ ಕಚೇರಿಗೆ ಹಾಜರಾಗಿರುವ ಮಾಹಿತಿ ಪಡೆದ ಧರ್ಮಸ್ಥಳ ಸಬ್ ಇನ್‌ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಅವರು ನೇರವಾಗಿ ಎಸ್ಐಟಿ ಕಚೇರಿಗೆ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಸ್ವೀಕರಿಸಿದ ಒಂದು ವಾರದೊಳಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...