ಮಂಗಳೂರು | ಬಿಜೆಪಿ ವಂದೇ ಮಾತರಂ ಹಾಡನ್ನು ರಾಜಕೀಯಗೊಳಿಸುತ್ತಿರುವುದು ಖಂಡನೀಯ: ಹರೀಶ್ ಕುಮಾರ್

Date:

ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆಯನ್ನು ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಗೌರವದಿಂದ ಹಾಡುತ್ತಾ ಬಂದಿದೆ. ಕಾಂಗ್ರೆಸ್ ಅಧಿವೇಶನಗಳು, ವಿವಿಧ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಕಚೇರಿಗಳಲ್ಲಿಯೂ ವಂದೇ ಮಾತರಂ ಹಾಡಲಾಗುತ್ತದೆ. ಆದರೆ, ಇದೀಗ ಬಿಜೆಪಿ ವಂದೇ ಮಾತರಂ ಗೀತೆಯನ್ನು ರಾಜಕೀಯಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಂದೇ ಮಾತರಂ ಕುರಿತು ಕಾಂಗ್ರೆಸ್‌ಗೆ ಬುದ್ಧಿ ಹೇಳುವ ಮೊದಲು ಆರೆಸ್ಸೆಸ್ ಮತ್ತು ಬಿಜೆಪಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ. ಆರೆಸ್ಸೆಸ್ ಕಚೇರಿಗಳಲ್ಲಿ ವಂದೇ ಮಾತರಂ ಹಾಡಲಾಗುತ್ತದೆಯೇ? ದೇಶದ ತ್ರಿವರ್ಣ ಧ್ವಜದ ಬಗ್ಗೆ ಆರೆಸ್ಸೆಸ್ ಮತ್ತು ಬಿಜೆಪಿಗೆ ನಿಜವಾದ ಗೌರವವಿದ್ದರೆ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ನಿಯಮಿತವಾಗಿ ಹಾರಿಸಲು ಪ್ರಾರಂಭಿಸಿದ ದಿನವನ್ನು ತಿಳಿಸಲಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಘ ಗೀತೆಗೆ ಮಾತ್ರ ಸೀಮಿತವಾಗದೆ ರಾಷ್ಟ್ರಗೀತೆ ಹಾಗೂ ರಾಷ್ಟ್ರೀಯ ಗೀತೆಗಳಿಗೆ ಗೌರವ ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಂಡು ನಂತರ ಕಾಂಗ್ರೆಸ್‌ಗೆ ದೇಶಭಕ್ತಿಯ ಪಾಠ ಹೇಳಲು ಬರಲಿ. ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಅಥವಾ ಜನಸಂಘದವರು ವಹಿಸಿದ ಪಾತ್ರವೇನು ಎಂಬುದನ್ನು ಬಿಜೆಪಿ ಮೊದಲು ದೇಶದ ಮುಂದೆ ಸ್ಪಷ್ಟಪಡಿಸಲಿ. ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್ ಅಥವಾ ಜನಸಂಘದ ಒಬ್ಬರಾದರೂ ಪ್ರಾಣತ್ಯಾಗ ಮಾಡಿದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ.

ಶಿಕ್ಷಣವನ್ನು ಕೇಸರೀಕರಣಗೊಳಿಸಿದವರು, ದೇಶದ ಪ್ರಧಾನಿಗಳು ದಶಕಗಳ ಕಾಲ ನಿರ್ಮಿಸಿದ ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಿದವರು ಹಾಗೂ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿರುವವರು ಕಾಂಗ್ರೆಸ್‌ಗೆ ದೇಶಭಕ್ತಿ ಮತ್ತು ಇತಿಹಾಸದ ಪಾಠ ಹೇಳುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಪರಂಪರೆಯನ್ನು ಹಾಗೂ ಸಂವಿಧಾನದ ಮೌಲ್ಯಗಳನ್ನು ಗೌರವಿಸಿಕೊಂಡು ಮುನ್ನಡೆಯುತ್ತಿದೆ. ದೇಶದ ಏಕತೆ, ಸಾರ್ವಭೌಮತೆ ಮತ್ತು ಜಾತ್ಯತೀತ ಆಶಯಗಳನ್ನು ಕಾಪಾಡುವುದು ಕಾಂಗ್ರೆಸ್‌ ನ ಬದ್ಧತೆಯಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...