ರಾಜ್ಯದ ಹಲವೆಡೆ ಭಾರಿ ಮಳೆ: ಮಂಗಳೂರಿನಲ್ಲಿ ವಿಮಾನಗಳ ಮಾರ್ಗ ಬದಲು

Date:

Advertisements

ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮಂಗಳೂರಿಗೆ ಬರುವ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರಿನಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದ ಕಾರಣ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿಮಾನಗಳನ್ನು ಕಳುಹಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಎರಡು ವಿಮಾನಗಳನ್ನು ವಾಪಾಸ್ ಬೆಂಗಳೂರಿಗೆ ಹಿಂದುರುಗಿಸಲಾಗಿದೆ. ಮಂಗಳೂರಿನ ಬಜ್ಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ.ಉಳಿದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಭಾಗದಲ್ಲಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದ ಕರಾವಳಿಯ ಕೆಲವೆಡೆ ಮಳೆಯಾಗಿದೆ. ಭಾರಿ ತಾಪಮಾನದಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಿದ್ದಾನೆ. ಕಡಬದಲ್ಲಿ ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಬುಧವಾರ ಸಂಜೆ ವರ್ಷಧಾರೆ ಸುರಿದಿದ್ದು, ತಂಪೆರೆದಿದೆ. ಮೂಡಿಗೆರೆ, ಕಳಸ, ಎನ್​ಆರ್ ಪುರ ತಾಲೂಕಿನ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಸುತ್ತಮುತ್ತ ‘ದಿಬ್ಬಣದ ಕುದುರೆಗಳು’ ಇವೆ ಎಂಬ ದೂರೂ ಇದೆಯಲ್ಲ?

ಹಾಸನ ಜಿಲ್ಲೆಯಲ್ಲಿ ವಿವಿಧೆಡೆ ಬಿರುಗಾಳಿ ಸಹಿತವಾಗಿ ಮಳೆ ಸುರಿದಿದೆ. ಮೊದಲ ಮಳೆಯ ಅಬ್ಬರ ಜೋರಾಗಿದ್ದು, ಭೂಮಿ ತಂಪಾಗಿದೆ. ಇತ್ತ ತುಮಕೂರಿನಲ್ಲೂ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಬಿಸಿಲಿನ ತಾಪಕ್ಕೆ ವರುಣರಾಯ ತಂಪೆರೆದಿದ್ದಾನೆ. ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಂಗಳವಾರ ಸಂಜೆಯೇ ಮಳೆಯಾಗಿತ್ತು.

ಬೆಂಗಳೂರಿಗೆ ಮತ್ತೆ ಮಳೆ ಮುನ್ಸೂಚನೆ
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಹೆಚ್ಚಿನ ಆರ್ದ್ರತೆ ಕಂಡುಬರುವ ನಿರೀಕ್ಷೆಯಿದೆ. ಐಎಂಡಿ ಪ್ರಕಾರ, ಗುರುವಾರ ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ, ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನದಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X