ಭಾರತೀಯ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಆಗಸ್ಟ್ 1, ಶನಿವಾರ ರಜೆ ಘೋಷಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ಪೋಷಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ





