ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) 2026ರ ಜುಲೈ 8ರಂದು (ಬುಧವಾರ) ರಜೆ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ನಾಳೆ ಯಾವುದೇ ತರಗತಿಗಳನ್ನು ನಡೆಸದಂತೆ ಸಂಬಂಧಿತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ಆದೇಶ ನೀಡಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.





