ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆ, ಕುಕ್ಕೆ ಸ್ನಾನಘಟ್ಟ ಮುಳುಗಡೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಘಾಟಿ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ, ಸ್ಥಳೀಯ ಆಡಳಿತದಿಂದ ಸೂಚನೆ ನೀಡಲಾಗಿದೆ.

- Advertisement -

ಸ್ನಾನಘಟ್ಟ ಬಳಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವವರಿಗೆ ಪರ್ಯಾಯ ವ್ಯವಸ್ಥೆಯಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ಪೊಲೀಸರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ಭಕ್ತರು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟದ ಮೇಲೆ ಆಡಳಿತ ನಿರಂತರ ನಿಗಾ ಇರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಪರ್ಯಾಯ ಸ್ನಾನ ವ್ಯವಸ್ಥೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ನದಿಗಳು, ಹೊಳೆಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳಿರುವ ಘಟನೆಗಳು ವರದಿಯಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಕುಮಾರಧಾರಾ, ನೇತ್ರಾವತಿ, ಗುಂಡ್ಯ ಹೊಳೆ, ಪಯಸ್ವಿನಿ ನದಿಗಳು ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಿಲ್ಲಾಡಳಿತವು ನದಿ ತೀರದ ನಿವಾಸಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಕಡಬದ ಕುಂತೂರು ಎಂಬಲ್ಲಿ ಅಡಿಕೆ ಮರ ಬಿದ್ದು ವೃದ್ಧ ಮೃತಪಟ್ಟಿದ್ದು, ಬಲ್ಪ ಎಂಬಲ್ಲಿ ಮನೆ ಮೇಲೆ ಮರ ಬಿದ್ದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೀನುಗಾರರು ಮತ್ತು ಪ್ರವಾಸಿಗರು ಜಲಾಶಯ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ನೀರಿನ ಮಟ್ಟ ಈ ವರ್ಷದ ಇದೇ ಮೊದಲ ಬಾರಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಧರ್ಮಸ್ಥಳ, ಉಪ್ಪಿನಂಗಡಿ(ನೇತ್ರಾವತಿ – ಕುಮಾರಧಾರಾ ಸಂಗಮ) ಅಷ್ಟೇ ಅಲ್ಲ, ಬಂಟ್ವಾಳದಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ.

ಇದನ್ನೂ ಓದಿದ್ದೀರಾ? ಕರಾವಳಿ ಭಾಗಗಳಲ್ಲಿ ಭಾರೀ ಮಳೆ: ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಪಶ್ಚಿಮ ಘಟ್ಟ ಪ್ರದೇಶ ಹಾಗೂ ನದಿಯ ಉಗಮಸ್ಥಾನದಲ್ಲಿ ಮಳೆಯಾಗುತ್ತಿರುವುದು ಇದಕ್ಕೆ ಕಾರಣವಾಗಿದೆ. ಬಂಟ್ವಾಳದ ಕಂಚಿಕಾರಪೇಟೆಯಲ್ಲಿರುವ ನೇತ್ರಾವತಿ ನದಿ ನೀರಿನ ಮಾಪನದಲ್ಲಿ ಶನಿವಾರ ಏರಿಕೆ ಕಂಡಿದ್ದು, ನದಿಯ ಮಟ್ಟ ಇಂದು 5.6 ಮೀಟರ್ ಇತ್ತು. ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಈ ವರ್ಷದಲ್ಲಿ ಮೊದಲ ಬಾರಿ ಈ ಮಟ್ಟವನ್ನು ತಲುಪಿರುವುದು ಗಮನಾರ್ಹ. ಇದುವರೆಗೂ ನಾಲ್ಕು, ಐದು ಮೀಟರ್ ಒಳಗೆ ಹರಿಯುತ್ತಿದ್ದ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿರುವುದು ಕೃಷಿಕರಲ್ಲಿ ಸಂತಸ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...