ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕಿದ್ದ ನಿರ್ಬಂಧ ತೆರವು; ವಿಚಾರಣಾ ನ್ಯಾಯಾಲಯದ ಪ್ರತಿಬಂಧಕಾದೇಶ ವಜಾಗೊಳಿಸಿದ ಹೈಕೋರ್ಟ್

Date:

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ.

- Advertisement -

ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

025ರ ಜುಲೈ 8ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಸ್‌ ಕಳುಹಿಸಲಾಗುತ್ತಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿ ಮಾಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು. ಸಿವಿಲ್‌ ದಾವೆ, ಕ್ರಿಮಿನಲ್‌ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

ಈ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಅರ್ಜಿದಾರರು ಮತ್ತು ಇತರ ಎಲ್ಲ ಪಕ್ಷಕಾರರು ಸಕ್ಷಮ ನ್ಯಾಯಾಲಯಕ್ಕೆ ಆದೇಶ ಮಾಡಲು ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಕರಣದ ಹಿನ್ನೆಲೆ:

ಡಿ.ಹರ್ಷೇಂದ್ರ ಕುಮಾರ್ ಅವರು 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿ 8,842 ಲಿಂಕ್‌ಗಳ ಪಟ್ಟಿಯನ್ನು ನಿರ್ಬಂಧಿಸುವಂತೆ ಕೋರಿ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮೂಲ ದಾವೆ ಹೂಡಿದ್ದರು.

ಸ್ವಚ್ಛತಾ ಕಾರ್ಮಿಕ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ಆರೋಪಗಳು ಇಲ್ಲದಿದ್ದರೂ ತಮ್ಮ ಕುಟುಂಬ, ಸಂಸ್ಥೆಗಳ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್‌ ಅವರು ದಾವೆಯಲ್ಲಿ ಆಕ್ಷೇಪಿಸಿದ್ದರು.

ವಿಚಾರಣೆ ನಡೆಸಿದ್ದ ನ್ಯಾಯಾಲಯ, ದಾವೆಯ ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಸ್ತುವಿಷಯ ಪ್ರಕಟಿಸದಂತೆ ಅಥವಾ ಹಂಚದಂತೆ ಪ್ರತಿವಾದಿ ಮಾಧ್ಯಮ ಸಂಸ್ಥೆಗಳು ಮತ್ತು ಅಪರಿಚಿತ ವ್ಯಕ್ತಿಗಳನ್ನು ನಿರ್ಬಂಧಿಸಿ ಜುಲೈ 8ರಂದು ಏಕಪಕ್ಷಕೀಯ ಪ್ರತಿಬಂಧಕಾದೇಶ ಮಾಡಿತ್ತು. ಇದನ್ನು ಕುಡ್ಲಾ ರ‍್ಯಾಂಪೇಜ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....