ಹಿಂದೂ ದಂಪತಿ 3ಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು- ದೀಪಾವಳಿ ಕಾರ್ಯಕ್ರಮದಲ್ಲೂ ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಭಟ್

Date:

“ನಮ್ಮ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಜನಪ್ರತಿನಿಧಿಗಳು ಆಯ್ಕೆಯಾಗುವುದು ಜನಗಳ ವೋಟಿನ ಆಧಾರದ ಮೇಲೆ. ಹಾಗಾಗಿ, ಹಿಂದೂಗಳ ವೋಟು ಹೆಚ್ಚಾಗಲು ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು. ಹಿಂದೂಗಳ ಮನೆಯಲ್ಲಿ ವೋಟಿನ ಸಂಖ್ಯೆ ಕಡಿಮೆ ಆಗಬಾರದು. ಈ ಬಗ್ಗೆ ಹಿಂದೂ ದಂಪತಿಗಳು ನಿರ್ಣಯ ಮಾಡಿಕೊಳ್ಳಬೇಕು” ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

- Advertisement -

ದೀಪಾವಳಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಪ್ರತಿನಿಧಿಸುವ ಮಂಗಳೂರು(ಉಳ್ಳಾಲ) ಕ್ಷೇತ್ರದ ಬಗ್ಗೆ ಮಾತನಾಡಿದ ಪ್ರಭಾಕರ್ ಭಟ್, “ಉಳ್ಳಾಲದಲ್ಲಿ ಹಿಂದೂ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ. ಯಾಕೆಂದರೆ ಅಲ್ಲಿನ ಬ್ಯಾರಿ(ಕರಾವಳಿಯ ಮುಸ್ಲಿಮರು)ಗಳ ಮನೆಯಲ್ಲಿ ಆರರಿಂದ ಏಳು ಮಕ್ಕಳಿದ್ದಾರೆ. ಅಲ್ಲಾನ ಹೆಸರಿನಲ್ಲಿ ಅವರು ಮಕ್ಕಳು ಮಾಡುತ್ತಲೇ ಇದ್ದಾರೆ. ಹಿಂದೂಗಳಲ್ಲಿ ವೋಟಿಲ್ಲದ ಕಾರಣ ನಮ್ಮವರು ಸೋಲುತ್ತಿದ್ದಾರೆ. ಉಳ್ಳಾಲದಲ್ಲಿ ಕೇವಲ 90 ಸಾವಿರ ಹಿಂದೂಗಳ ವೋಟಿದೆ. ಆದರೆ, ಒಂದು ಲಕ್ಷದ 10 ಸಾವಿರ ಬ್ಯಾರಿಗಳೇ ಇದ್ದಾರೆ. ಹಾಗಾಗಿ, ಖಾದರ್ ಗೆಲ್ಲುತ್ತಲೇ ಇದ್ದಾರೆ. ಹಾಗಾಗಿ, ಹಿಂದೂಗಳು ಮಕ್ಕಳು ಮಾಡಬೇಕು” ಎಂದು ಕರೆ ನೀಡಿದ್ದಾರೆ.

“ಹಿಂದೂಗಳನ್ನು ವ್ಯವಸ್ಥಿತವಾಗಿ ನಿರ್ನಾಮ ಮಾಡುವ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಹಿಂದೂ ದಂಪತಿಗಳು ಮದುವೆಯಾಗಿ ಏಳೆಂಟು ವರ್ಷವಾದರೂ ಮಕ್ಕಳನ್ನು ಹೆರುವುದಿಲ್ಲ. ಹಿಂದೂ ಸಮಾಜ ಉಳಿಯಬೇಕೂಂತಾದರೆ ಹಿಂದೂಗಳು ಮಕ್ಕಳು ಮಾಡುವುದಕ್ಕೆ ಹಿಂದೆ-ಮುಂದೆ ಯೋಚಿಸಬಾರದು. ಹಿಂದೂಗಳ ಸಂಖ್ಯೆ ಹೆಚ್ಚಾಗಬೇಕಾದರೆ ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು. ಹಿಂದೂಗಳ ಸಂಖ್ಯೆ ಉಳಿಯಬೇಕಾದರೆ ಹಿಂದೂ ಹೆಣ್ಣು ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು. ಇದನ್ನು ನಿರ್ಣಯವಾಗಿ ಮಾಡಿಕೊಂಡು, ಬ್ಯಾರ್ದಿಗಳಿಗಿಂತ ಹೆಚ್ಚು ಮಕ್ಕಳನ್ನು ಹೆರಬೇಕು. ಇದೆಲ್ಲವನ್ನೂ ಯೋಜನೆ ಹಾಕಿಕೊಂಡು ಹಿಂದೂಗಳು ಬದುಕಬೇಕಾದ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...