ಮಹಿಳೆಯೊಬ್ಬರು ಬಸ್‌ನಲ್ಲಿ ಬಿಟ್ಟುಹೋಗಿದ್ದ ಬ್ಯಂಗ್‌ಅನ್ನು ಆಕೆಗೆ ತಲುಪಿಸಿ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ವೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳಿದ್ದ ಮಹಿಳೆ, ಸುಮಾರು 50,000 ರೂ. ಮೌಲ್ಯದ ವಸ್ತುಗಳಿದ್ದ ಬ್ಯಾಗ್‌ಅನ್ನು ಬಸ್‌ನಲ್ಲೇ ಬಿಟ್ಟು ಹೋಗಿದ್ದರು. ಆ ಬ್ಯಾಗ್‌ಅನ್ನು ಗಮನಿಸಿದ ಕಂಡಕ್ಟರ್ ಜಯರಾಜ್ ಅವರು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ್ದರು.
ಪೊಲೀಸರು ಮಹಿಳೆಯನ್ನು ಸಂಪರ್ಕಿಸಿ, ಆಕೆಯನ್ನು ಠಾಣೆಗೆ ಕರೆಸಿ, ಬ್ಯಾಂಗ್‌ಅನ್ನು ಮಹಿಳೆಗೆ ನೀಡಿದ್ದಾರೆ. ಕಂಡಕ್ಟರ್ ಜಯರಾಜ್ ಅವರನ್ನು ಪ್ರಶಂಸಿದ್ದಾರೆ.