ಸೋನಂ ವಾಂಗ್ಚುಕ್ ಹೋರಾಟಕ್ಕೆ ಬೆಂಬಲ: ನಿವೃತ್ತ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ 48 ಗಂಟೆಗಳ ಉಪವಾಸ ಸತ್ಯಾಗ್ರಹ

Date:

ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಂಗಳೂರಿನ ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು 48 ಗಂಟೆಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

- Advertisement -

ಭಾನುವಾರ ಬೆಳಗ್ಗೆ ಆರಂಭಗೊಂಡಿರುವ ಈ ಉಪವಾಸವು ಮಂಗಳವಾರ ಬೆಳಗ್ಗಿನವರೆಗೆ ಮುಂದುವರಿಯಲಿದೆ. ಸೋನಂ ವಾಂಗ್ಚುಕ್ ಹಾಗೂ ಇತರ ಪ್ರತಿಭಟನಾಕಾರರ ಸಂಕಲ್ಪ ಮತ್ತು ನೋವನ್ನು ಅನುಭವಿಸುವ ಉದ್ದೇಶದಿಂದ ಈ ಸತ್ಯಾಗ್ರಹ ಕೈಗೊಂಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನವನ್ನು ಖಚಿತಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ನಂದಗೋಪಾಲ್ ಅವರು ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದು, ಮಕ್ಕಳು ಮತ್ತು ಯುವಕರಿಗಾಗಿ ಪರ್ಯಾಯ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಅವರು ‘ಡ್ರೀಮ್ಸ್ ಆನ್ ವೀಲ್ಸ್’ ಬೈಕ್ ಅಭಿಯಾನದ ಮೂಲಕ 6,500 ಕಿ.ಮೀ. ಸಂಚರಿಸಿ 5,000ಕ್ಕೂ ಹೆಚ್ಚು ಸರ್ಕಾರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಸಿದ್ಧತೆ ಹಾಗೂ ವೃತ್ತಿ ಮಾರ್ಗದರ್ಶನ ಕುರಿತು ಸಂವಾದ ನಡೆಸಿದ್ದರು.

“ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ಮೋಸಗಳು ಆತಂಕಕಾರಿ. ಈಗ ಯಾರಾದರೂ ಬೆಕ್ಕಿಗೆ ಗಂಟೆ ಕಟ್ಟುವ ಸಮಯ ಬಂದಿದೆ” ಎಂದು ನಂದಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...