ಬಂಟ್ವಾಳ ಯುವತಿ ಹತ್ಯೆ: ಆರೋಪಿ ʼಹಿಂದೂʼವೆಂಬ ಕಾರಣಕ್ಕೆ ಮೌನವಾಯಿತೇ ಕರಾವಳಿ?

Date:

ಒಂದು ಕಾಲದಲ್ಲಿ ಮತೀಯ ಸಂಘರ್ಷಗಳು ಮತ್ತು ಸರಣಿ ಹತ್ಯೆಗಳ ಕಾರಣದಿಂದ ʼಮರ್ಡರ್ ಸಿಟಿʼ ಎಂಬ ಅಪಖ್ಯಾತಿ ಪಡೆದಿದ್ದ ಮಂಗಳೂರು, ಕಳೆದ ಕೆಲವು ವರ್ಷಗಳಲ್ಲಿ ಆ ವಾತಾವರಣದಿಂದ ಹೊರಬಂದಂತೆ ಕಂಡಿತ್ತು. ಪೊಲೀಸ್ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದ ಮತೀಯ ಹಿನ್ನೆಲೆಯ ಹಿಂಸಾಚಾರ ಕಡಿಮೆಯಾಗಿದ್ದು, ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸುವಂತಾಗಿತ್ತು.

- Advertisement -

ಆದರೆ ಇತ್ತೀಚಿನ ದಿನಗಳಲ್ಲಿ ಮತ್ತೆ ಚಾಕು ದಾಳಿಗಳ ಘಟನೆಗಳು ಆತಂಕ ಹುಟ್ಟಿಸುತ್ತಿವೆ. ಈ ಬಾರಿ ಘಟನೆಗಳಿಗೆ ಮತೀಯ ಹಿನ್ನೆಲೆ ಇಲ್ಲದಿದ್ದರೂ, ಅಮಾಯಕ ಯುವತಿಯರೇ ಗುರಿಯಾಗುತ್ತಿರುವುದು ಹೆಚ್ಚು ಕಳವಳಕಾರಿ ಬೆಳವಣಿಗೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಳೆದ ಒಂದು ವಾರದ ಅಂತರದಲ್ಲಿ ಇಬ್ಬರು ಯುವತಿಯರ ಮೇಲೆ ಭೀಕರ ಹಲ್ಲೆಗಳು ನಡೆದಿವೆ. ಒಬ್ಬ ಯುವತಿ ಬಂಟ್ವಾಳದ ಬಿ.ಸಿ ರೋಡ್‌ನಲ್ಲಿ ನಡುರಸ್ತೆಯಲ್ಲೇ ಚಾಕು ಇರಿತಕ್ಕೆ ಬಲಿಯಾಗಿದ್ದರೆ, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇಂತಹ ಘಟನೆಗಳು ಸಮಾಜದ ಪ್ರತಿಯೊಬ್ಬರನ್ನೂ ಬೆಚ್ಚಿಬೀಳಿಸುವಂತಹ ಸಂಗತಿಗಳಾಗಿವೆ.

ಗುರುವಾರದಂದು ಬಂಟ್ವಾಳದ ಬಿ.ಸಿ ರೋಡ್‌ನಲ್ಲಿ 21 ವರ್ಷದ ಲಾವಣ್ಯ ಎಂಬ ಯುವತಿಯನ್ನು ಸಾರ್ವಜನಿಕ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಘಟನೆ ಕರಾವಳಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಪ್ರಕರಣದ ಆರೋಪಿಯನ್ನು ಪೊಲೀಸರು ಶೀಘ್ರವೇ ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ವಿವಿಧ ಸಾಮಾಜಿಕ ಹೋರಾಟಗಾರರು ಮತ್ತು ಸಂಘಟನೆಗಳು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಈಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

WhatsApp Image 2026 07 19 at 2.48.38 PM

ಈ ಕುರಿತು ಈದಿನ.ಕಾಮ್‌ ಜತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ನಾಗೇಂದ್ರ ಪುತ್ರನ್, “ಹಿಂದೂ ಯುವತಿ ಕೊಲೆಯಾದರೆ ಆರೋಪಿಯ ಧರ್ಮವನ್ನು ನೋಡಿ ಪ್ರತಿಕ್ರಿಯಿಸುವ ರಾಜಕೀಯ ನಡೆಯಬಾರದು. ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿ ಕೊಂದಿದ್ದರೆ ಕರಾವಳಿ ಬಂದ್, ಪ್ರತಿಭಟನೆ, ಧರ್ಮ ರಕ್ಷಣೆಯ ಘೋಷಣೆಗಳು ಕೇಳಿಬರುತ್ತಿದ್ದವು. ಆದರೆ ಈಗಲೂ ಒಬ್ಬ ಹೆಣ್ಣುಮಗಳ ಹತ್ಯೆಯಾಗಿದ್ದರೂ ಕೂಡ ಆರೋಪಿಯೂ ಹಿಂದೂ ಎಂಬ ಕಾರಣಕ್ಕೆ ಹಲವರು ಮೌನ ವಹಿಸಿದ್ದಾರೆ. ಮಹಿಳೆಯ ಜೀವದ ಮೌಲ್ಯವನ್ನು ಧರ್ಮದ ಆಧಾರದ ಮೇಲೆ ಅಳೆಯಲಾಗುತ್ತಿದೆ. ಇದು ಸರಿಯಲ್ಲ. ಒಂದು ವೇಳೆ ಹಿಂದೂ ಹೆಣ ಬಿದ್ದಿದ್ದರೆ, ಮುಸ್ಲಿಂ ಹತ್ಯೆ ಮಾಡಿದ್ದರೆ ಕರಾವಳಿ ಬಂದ್ ಆಗುತ್ತಿತ್ತು. ಈಗ ಹಿಂದೂ ಹೆಣ ಬಿದ್ದಿದೆ, ಹಿಂದೂವೇ ಮಾಡಿದ್ದಾನೆ. ಬಿಜೆಪಿ ಯಾಕೆ ಬಾಯ್ಬಿಡುತ್ತಿಲ್ಲ? ಯಾಕೆ ಬಂದ್‌ಗೆ ಕರೆ ನೀಡುತ್ತಿಲ್ಲ” ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟಿದ್ದಾರೆ. ಅಪರಾಧವನ್ನು ಅಪರಾಧವಾಗಿಯೇ ನೋಡಬೇಕೇ ಹೊರತು, ಆರೋಪಿಯ ಅಥವಾ ಸಂತ್ರಸ್ತೆಯ ಧರ್ಮದ ಆಧಾರದ ಮೇಲೆ ಸಮಾಜದ ಪ್ರತಿಕ್ರಿಯೆ ಬದಲಾಗಬಾರದು. ಯಾವುದೇ ಮಹಿಳೆಯ ಮೇಲಿನ ಹಿಂಸಾಚಾರಕ್ಕೆ ಒಂದೇ ರೀತಿಯ ನ್ಯಾಯದ ಧ್ವನಿ ಕೇಳಿಬರಬೇಕು” ಎಂದು ಒತ್ತಾಯಿಸಿದರು.

ಇನ್ನೊಂದೆಡೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ), ಸಿಪಿಐ(ಎಂ) ಮಂಗಳೂರು ನಗರ ಸಮಿತಿ ಹಾಗೂ ವಿಮೆನ್ ಇಂಡಿಯಾ ಮೂವ್ಮೆಂಟ್ ಸೇರಿದಂತೆ ಹಲವು ಸಂಘಟನೆಗಳು ಘಟನೆಯನ್ನು ಖಂಡಿಸಿವೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ, ಮಹಿಳೆಯರ ಸುರಕ್ಷತೆಗೆ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ), ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ ಜಿಲ್ಲಾ ಸಮಿತಿಯ ಖಂಡನೆ

ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ತಲವಾರಿನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ), ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ ಜಿಲ್ಲಾ ಸಮಿತಿಯು ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಸಮಿತಿಯು, ಕಕ್ಯಪದವು ಸಮೀಪದ ಉಳಿ ಗ್ರಾಮದ ಕೊಡಂಗೆ ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಚೇತನ್ ಹತ್ಯೆಗೈದಿರುವ ಅಮಾನವೀಯ ಕೃತ್ಯ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರನ್ನು ಬೆಚ್ಚಿಬೀಳಿಸಿದೆ ಎಂದು ಹೇಳಿದೆ.

ವಿದ್ಯಾವಂತರ ಜಿಲ್ಲೆ, ಬುದ್ಧಿವಂತರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಇಂತಹ ಕ್ರೂರ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯ ಮಾನಕ್ಕೆ ಧಕ್ಕೆಯಾಗಿದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ. ಕಳೆದ ಎರಡು ವರ್ಷಗಳಿಂದ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳಿಂದ ಇಂತಹ ಘಟನೆಗಳು ಕಡಿಮೆಯಾಗಿದ್ದರೂ, ಮತ್ತೆ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂದು ತಿಳಿಸಿದೆ.

ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮವನ್ನು ಸಮಿತಿಯು ಸ್ವಾಗತಿಸಿದ್ದು, ಆರೋಪಿಯ ವಿರುದ್ಧ ಯಾವುದೇ ಸಡಿಲಿಕೆ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಜತೆಗೆ ಮಹಿಳೆಯರ ಮೇಲಿನ ಹಿಂಸಾಚಾರ ತಡೆಗಟ್ಟಲು ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಿ, ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಬೇಕೆಂದು ಆಗ್ರಹಿಸಿದೆ.

WhatsApp Image 2026 07 19 at 2.45.07 PM

ಸಿಪಿಐ(ಎಂ) ಮಂಗಳೂರು ನಗರ ಸಮಿತಿಯ ಖಂಡನೆ

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಯುವತಿ ಲಾವಣ್ಯ ಅವರ ಬರ್ಬರ ಹತ್ಯೆ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಿದ್ದು, ಈ ಅಮಾನವೀಯ ಕೃತ್ಯವನ್ನು ಸಿಪಿಐ(ಎಂ) ಮಂಗಳೂರು ನಗರ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಪಕ್ಷದ ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪ್ರಕಟಣೆ ನೀಡಿ, “ಮಹಿಳೆಯರ ಮೇಲಿನ ಹಿಂಸಾಚಾರವನ್ನು ಕೇವಲ ಒಂದು ಅಪರಾಧ ಪ್ರಕರಣವಾಗಿ ಮಾತ್ರ ನೋಡದೆ, ಮಹಿಳೆಯನ್ನು ಕೀಳಾಗಿ ಕಾಣುವ ಪುರುಷಪ್ರಧಾನ ಮನೋಭಾವ, ಸಾಮಾಜಿಕ ಅಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಕುಸಿತದ ಪರಿಣಾಮವೆಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಮಹಿಳೆಯರ ಸ್ವಾತಂತ್ರ್ಯ, ಸಮಾನತೆ ಹಾಗೂ ಬದುಕುವ ಹಕ್ಕಿಗೆ ಗೌರವ ನೀಡದ ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಆದ್ದರಿಂದ ಮಹಿಳಾ ವಿರೋಧಿ ಮನೋಭಾವವನ್ನು ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಟ್ಟದಲ್ಲಿ ಎದುರಿಸುವುದು ಅಗತ್ಯವಾಗಿದೆ” ಎಂದು ತಿಳಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದಾಳಿಗಳು ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದ್ದು, ಅಪರಾಧ ನಡೆದಾಗ ಸಂತ್ರಸ್ತೆ ಅಥವಾ ಆರೋಪಿಯ ಧರ್ಮ, ಜಾತಿ ಅಥವಾ ಸಮುದಾಯವನ್ನು ಮುಂದಿಟ್ಟು ನ್ಯಾಯದ ಪ್ರಶ್ನೆಯನ್ನು ದಿಕ್ಕುತಪ್ಪಿಸುವ ಪ್ರಯತ್ನಗಳು ಖಂಡನೀಯ” ಎಂದು ಸಿಪಿಐ(ಎಂ) ಹೇಳಿದೆ.

“ಅಪರಾಧವನ್ನು ಧಾರ್ಮಿಕ ಅಥವಾ ರಾಜಕೀಯ ಧ್ರುವೀಕರಣಕ್ಕೆ ಬಳಸುವ ಪ್ರವೃತ್ತಿ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುತ್ತದೆ. ಅಪರಾಧಕ್ಕೆ ಧರ್ಮವಿಲ್ಲ, ಅಪರಾಧಿಗೆ ಕಾನೂನಿನ ಮುಂದೆ ಮಾತ್ರ ಹೊಣೆಗಾರಿಕೆ ಇದೆ ಎಂಬ ತತ್ವವನ್ನು ಎಲ್ಲರೂ ಪಾಲಿಸಬೇಕು” ಎಂದು ಸಮಿತಿ ತಿಳಿಸಿದೆ.

“ಪ್ರಕರಣದ ತನಿಖೆಯನ್ನು ತ್ವರಿತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಿ, ಯಾವುದೇ ಪ್ರಭಾವಕ್ಕೂ ಮಣಿಯದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜತೆಗೆ ಮಹಿಳೆಯರ ಸುರಕ್ಷತೆಗೆ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು, ಸಮಾಜದಲ್ಲಿ ಲಿಂಗ ಸಮಾನತೆಯ ಮೌಲ್ಯಗಳನ್ನು ಬೆಳೆಸುವ ಕೆಲಸಕ್ಕೂ ಆದ್ಯತೆ ನೀಡಬೇಕು” ಎಂದು ಸಿಪಿಐ(ಎಂ) ಆಗ್ರಹಿಸಿದೆ.

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಖಂಡನೆ

ಬಂಟ್ವಾಳದ ಬಿ.ಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಸಾರ್ವಜನಿಕ ಸ್ಥಳದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ತೀವ್ರವಾಗಿ ಖಂಡಿಸಿದೆ.

ಸಂಘಟನೆಯ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ಅವರು ಪ್ರಕಟಣೆ ನೀಡಿ, “ಬಂಟ್ವಾಳ ಪರಿಸರದಲ್ಲಿ ಒಂದೇ ತಿಂಗಳೊಳಗೆ ಎರಡನೇ ಬಾರಿ ಇಂತಹ ಭೀಕರ ಘಟನೆ ಸಂಭವಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ” ಎಂದು ಹೇಳಿದ್ದಾರೆ.

“ಸಾರ್ವಜನಿಕ ಸ್ಥಳದಲ್ಲಿಯೇ ಮಹಿಳೆಯ ಮೇಲೆ ಇಂತಹ ಕ್ರೂರ ದಾಳಿ ನಡೆದಿರುವುದು ರಾಜ್ಯದ ಕಾನೂನು-ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಹಿಳೆಯರು ಭಯವಿಲ್ಲದೆ ಸಂಚರಿಸುವ ವಾತಾವರಣವನ್ನು ನಿರ್ಮಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ” ಎಂದು ತಿಳಿಸಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜತೆಗೆ, ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿದ್ದೀರಾ? ಕೊಪ್ಪಳ | ಬಲ್ಡೋಟ ಕಂಪೆನಿ ತೊಲಗಿಸಿ ಆಂದೋಲನ: 261ನೇ ದಿನ ಪೂರ್ಣ

ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಇಂತಹ ಅಮಾನವೀಯ ಹಾಗೂ ಹೇಯ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಶಾಶ್ವತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.

ಒಟ್ಟಿನಲ್ಲಿ ಬಿ.ಸಿ ರೋಡ್ ಹತ್ಯೆ ಪ್ರಕರಣವು ಕೇವಲ ಒಂದು ಕ್ರಿಮಿನಲ್ ಪ್ರಕರಣವಾಗಿಯೇ ಉಳಿದಿಲ್ಲ. ಮಹಿಳೆಯರ ಸುರಕ್ಷತೆ, ಅಪರಾಧಗಳ ಬಗ್ಗೆ ಸಮಾಜದ ಆಯ್ದ ಪ್ರತಿಕ್ರಿಯೆ, ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳ ನಿಲುವು ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ. ಮಹಿಳೆಯ ಜೀವದ ಪ್ರಶ್ನೆಯಲ್ಲಿ ಧರ್ಮ, ಜಾತಿ ಅಥವಾ ರಾಜಕೀಯಕ್ಕಿಂತ ನ್ಯಾಯ ಮತ್ತು ಸುರಕ್ಷತೆ ಮುಖ್ಯವಾಗಬೇಕು ಎಂಬುದು ವಿವಿಧ ವಲಯಗಳಿಂದ ಆಗ್ರಹ ವ್ಯಕ್ತವಾಗುತ್ತಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...