ದಕ್ಷಿಣ ಕನ್ನಡ | 180 ಗಂಟೆಗಳ ಮೈಲಿಗಲ್ಲನ್ನು ತಲುಪಿದ ಕೊಂಕಣಿ ಗಾಯನ ಮ್ಯಾರಾಥಾನ್

Date:

ಮಂಗಳೂರು: ಮಾಂಡ್ ಸೊಭಾನ್ ಆಯೋಜಿಸಿರುವ ಐತಿಹಾಸಿಕ 12 ದಿನ, 12 ಗಂಟೆ ಮತ್ತು 12 ನಿಮಿಷಗಳ ಕೊಂಕಣಿ ಗಾಯನ ಮಾರಾಥಾನ್ ಮಂಗಳೂರಿನ ಟೌನ್ ಹಾಲ್‌ನಲ್ಲಿ ಯಶಸ್ವಿಯಾಗಿ 8ನೇ ದಿನಕ್ಕೆ ಕಾಲಿಟ್ಟಿದ್ದು, 180 ಗಂಟೆಗಳ ಮೈಲಿಗಲ್ಲನ್ನು ತಲುಪಿದೆ.

- Advertisement -

ವಿಶ್ವ ಗಿನ್ನೆಸ್ ಧಾಖಲೆಯ ಇತಿಹಾಸಕ್ಕೆ ಸೇರಲು ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಈ ಅಭೂತಪೂರ್ವ ಸಾಂಸ್ಕೃತಿಕ ಕಾರ್ಯಕ್ರಮವು ತನ್ನ ವಿಶ್ವ ದಾಖಲೆಯ ಗುರಿಯತ್ತ ವಿಜಯದ ನಡಿಗೆ ಮುಂದುವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...
IMG 20261110 WA0092

ಇಲ್ಲಿಯವರೆಗೆ, 180 ಸಂಗೀತ ತಂಡಗಳು ವೇದಿಕೆ ಏರಿ, ಯಾವುದೇ ಅಡೆತಡೆಯಿಲ್ಲದೆ ನಿರಂತರ ಪ್ರದರ್ಶನಗಳನ್ನು ನೀಡಿವೆ. ಈ ಪ್ರಯತ್ನವು ಭೌಗೋಳಿಕ ಗಡಿಗಳನ್ನು ಮೀರಿ ಕೊಂಕಣಿ ಭಾಷಿಕರನ್ನು ಒಂದಗೂಡಿಸಿದ್ದು, ಕರಾವಳಿ ಕರ್ನಾಟಕ ಮಾತ್ರವಲ್ಲದೆ ಗೋವಾ, ಕೇರಳ ಮತ್ತು ವಿದೇಶಗಳಿಂದಲೂ ಉತ್ತಮ ತರಬೇತಿ ಪಡೆದ ಹಾಗೂ ಸಮರ್ಪಿತ ತಂಡಗಳು ಭಾಗವಹಿಸಿವೆ.

ಈ ಐತಿಹಾಸಿಕ ವೇದಿಕೆಯು ಇಂದು ಹಲವಾರು ಗಣ್ಯರ ಭೇಟಿಗೆ ಸಾಕ್ಷಿಯಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ (MLC) ಐವನ್ ಡಿಸೋಜಾ, ಮಂಗಳೂರು ಮಹಾನಗರ ಪಾಲಿಕೆ (MCC) ಆಯುಕ್ತ ದರ್ಶನ್ ಹೆಚ್.ವಿ. (IAS), ಕರ್ನಾಟಕ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಕಲೆ, ರಾಜಕೀಯ ಮತ್ತು ಉದ್ಯಮ ರಂಗದ ಪ್ರಮುಖ ಗಣ್ಯರು ಟೌನ್ ಹಾಲ್‌ಗೆ ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು.

IMG 20261110 WA0090

ನಿರಂತರ ನೇರ ಪ್ರಸಾರ ಮತ್ತು ಕಾರ್ಯಕ್ರಮ ನಿರ್ವಹಣೆಯನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಹಗಲಿರುಳು ಶ್ರಮಿಸುತ್ತಿರುವ ತಾಂತ್ರಿಕ ಸಿಬ್ಬಂದಿ ಹಾಗೂ ಆಯೋಜಕ ಸಮಿತಿಗೆ ಮತ್ತು ಪ್ರದರ್ಶನ ನೀಡಿದ ಕಲಾವಿದರಿಗೆ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಈ ಐತಿಹಾಸಿಕ ಮಾರಾಥಾನ್ ಒಟ್ಟು 12 ದಿನ, 12 ಗಂಟೆ ಮತ್ತು 12 ನಿಮಿಷಗಳ ಕಾಲ ನಡೆಯಲಿದ್ದು, ನವೆಂಬರ್ 15, ರವಿವಾರ ಸಂಜೆ 5:00 ಗಂಟೆಗೆ ಅದ್ಧೂರಿ ಸಮಾರೋಪದೊಂದಿಗೆ ಮುಕ್ತಾಯಗೊಳ್ಳಲಿದೆ. ಈ ವಿಶ್ವ ದಾಖಲೆಯ ಅಧಿಕೃತ ಘೋಷಣೆಗೆ ಸಾಕ್ಷಿಯಾಗಲು ಜಗತ್ತಿನಾದ್ಯಂತದ ಸಂಗೀತ ಪ್ರೇಮಿಗಳು, ಸಾಂಸ್ಕೃತಿಕ ಆಸಕ್ತರು ಮತ್ತು ಬೆಂಬಲಿಗರು ಭಾರಿ ಸಂಖ್ಯೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

IMG 20261110 WA0083
eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಗದಗ | ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಸಂಕಲ್ಪ: ಡಿಡಿಪಿಐ ಕೆ.ಡಿ. ಬಡಿಗೇರ

"2026-27ನೇ ಸಾಲಿನ SSLC ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಫಲಿತಾಂಶವನ್ನು ಗಣನೀಯವಾಗಿ ಸುಧಾರಿಸುವುದರ...

ಗದಗ | ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣ...

ವಿಜಯಪುರ |ಸರ್ಕಾರಿ ಶಾಲೆಗಳ ಖಾಸಗೀಕರಣಕ್ಕೆ ಆಪ್ ವಿರೋಧ: ಭೋಗೇಶ್ ಸೋಲಾಪುರ್

ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ...