ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

Date:

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

- Advertisement -

ಬೆಂಗಳೂರಿನಿಂದ ಮಂಗಳೂರು-ಮಡಗಾಂವ್ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು 2025ರ ನವೆಂಬರ್ 12, 2026ರ ಜೂನ್ 6 ಹಾಗೂ ಆಗಸ್ಟ್ 10ರಂದು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ಮಡಗಾಂವ್-ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉಡುಪಿ, ಕುಂದಾಪುರ ಹಾಗೂ ಕಾರವಾರ ಮಾರ್ಗವಾಗಿ ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಈ ರೈಲು 26655/26656 ಯಶವಂತಪುರ-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಹೆಸರಿನಲ್ಲಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸಂಚರಿಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...