ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸಂಬಂಧಿಸಿದ ಗಡಿಪಾರು ಆದೇಶದ ಮೇಲೆ ಕರ್ನಾಟಕ ಹೈಕೋರ್ಟ್ ಮಾ.24ರಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ನೀಡಿದ್ದ ಮೂರನೇ ಗಡಿಪಾರು ಆದೇಶದಂತೆ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಬೇಕಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ತಾತ್ಕಾಲಿಕವಾಗಿ ಆದೇಶವನ್ನು ಸ್ಥಗಿತಗೊಳಿಸಿ ಮಧ್ಯಂತರ ರಿಲೀಫ್ ನೀಡಿದೆ.





