ಗಿನ್ನಿಸ್ ದಾಖಲೆಯತ್ತ ಕೊಂಕಣಿ ಗಾಯನ ಮಾರಾಥಾನ್: 130 ಗಂಟೆಗಳ ಮೈಲಿಗಲ್ಲು ದಾಟಿದ ʻಮಾಂಡ್ ಸೊಭಾಣ್ʼ

Date:

ಮಂಗಳೂರಿನ ಟೌನ್‌ಹಾಲ್‌ನಲ್ಲಿ ‘ಮಾಂಡ್ ಸೊಭಾಣ್‌’ ಸಂಸ್ಥೆಯು ಆಯೋಜಿಸಿರುವ ‘ದೀರ್ಘಾವಧಿಯ ಗಾಯನ ಮಾರಾಥಾನ್ (ಹಲವು ಗಾಯಕರು)’ (Longest Singing Marathon – Multiple Singers) ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಯತ್ನವು ಅಧಿಕೃತವಾಗಿ 130 ಗಂಟೆಗಳ ಮೈಲಿಗಲ್ಲನ್ನು ದಾಟಿದೆ.

- Advertisement -

ಯಾವುದೇ ಹಾಡು ಹಾಗೂ ಗಾಯಕರನ್ನು ಪುನರಾವರ್ತಿಸದೆ ನಿರಂತರವಾಗಿ ಸಾಗುತ್ತಿರುವ ಈ ಐತಿಹಾಸಿಕ ಮಾರಾಥಾನ್, ತನ್ನ ಪ್ರಯಾಣದ ಅರ್ಧ ಹಂತವನ್ನು ತಲುಪಲು ಸಜ್ಜಾಗಿದೆ. ಈ ಸಾಧನೆಯು ಪೂರ್ಣಗೊಂಡಾಗ ಕೊಂಕಣಿ ಭಾಷೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವುದಲ್ಲದೆ, ದಕ್ಷಿಣ ಕನ್ನಡ ಹಾಗೂ ಕರ್ನಾಟಕ ರಾಜ್ಯಕ್ಕೆ ಅಪಾರ ಕೀರ್ತಿ ತರಲಿದ್ದು, ಹೊಸ ವಿಶ್ವದಾಖಲೆಯನ್ನು ಬರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’:...

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್‌ಐಆರ್‌ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ...

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...
IMG 20261108 WA0140

ದಿನದಿಂದ ದಿನಕ್ಕೆ ಮಂಗಳೂರಿನ ಟೌನ್‌ಹಾಲ್‌ನಲ್ಲಿ ಸಂಗೀತ ಮತ್ತು ಸಂಸ್ಕೃತಿಯ ಹಬ್ಬದ ವಾತಾವರಣ ಕಳೆಗಟ್ಟುತ್ತಿದ್ದು, ಸಂಭ್ರಮದ ಕಳೆ ಹೆಚ್ಚುತ್ತಿದೆ. ಕರಾವಳಿ ಕರ್ನಾಟಕದ ಸ್ಥಳೀಯ ಕೊಂಕಣಿ ಸಮುದಾಯದ ಜೊತೆಗೆ, ರಾಜ್ಯದ ಮೂಲೆ ಮೂಲೆಗಳಿಂದ ಬೃಹತ್ ಸಂಖ್ಯೆಯ ಪ್ರೇಕ್ಷಕರು, ಸಂಗೀತ ಪ್ರೇಮಿಗಳು ಹಾಗೂ ಕೊಂಕಣಿ ಭಾಷಾಭಿಮಾನಿಗಳು ಈ ಅಪರೂಪದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಆಗಮಿಸುತ್ತಿದ್ದಾರೆ.

ಕೊಂಕಣಿ ಜಗತ್ತಿನ ಪ್ರಮುಖ ಗಣ್ಯರು ಕೂಡ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಆಯೋಜಕರಾದ ಮಾಂಡ್ ಸೊಭಾಣ್ ಸಂಸ್ಥೆಗೆ ಹಾಗೂ ಭಾಗವಹಿಸುತ್ತಿರುವ ಸಾವಿರಾರು ಗಾಯಕರಿಗೆ ತಮ್ಮ ಬೆಂಬಲ ಮತ್ತು ಪ್ರೋತ್ಸಾಹವನ್ನು ಸೂಚಿಸಿದ್ದಾರೆ.

IMG 20261108 WA0139
eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ

ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ...

ಉಡುಪಿ | ಅಕ್ಕಿ ಬೆಲೆ ಏರಿಕೆ ಬೆನ್ನಲ್ಲೇ ಭತ್ತಕ್ಕೂ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ...

ಕುಂದಾಪುರದಲ್ಲಿ ಸಂಭ್ರಮದ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಕಾರ್ಯಕ್ರಮ

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ...