ಈ ಬಾರಿಯ “ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಗೆ ಮಂಗಳೂರು ಮೂಲದ ಹಿರಿಯ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ಡಿಡಿ ದೂರದರ್ಶನ ವರದಿಗಾರ ರಾಜೇಶ್ ದಡ್ಡಂಗಡಿ ಹಾಗೂ ಪತ್ರಕರ್ತ ಶಂಶೀರ್ ಬುಡೋಳಿ ಆಯ್ಕೆಯಾಗಿದ್ದಾರೆ.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸರಗೋಡು ಕನ್ನಡ ಗ್ರಾಮದಲ್ಲಿ 2026 ರ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ನಡೆಯುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ತಿಳಿಸಿದ್ದಾರೆ. ನವೆಂಬರ್ 28 ಬೆಳಿಗ್ಗೆ 10 ಗಂಟೆಗೆ ಕೇರಳ-ಕರ್ನಾಟಕ ಉತ್ಸವ, ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ, ಕೇರಳ – ಕರ್ನಾಟಕ ಭವನದ ಭೂಮಿಪೂಜೆ, ಶಿಲಾನ್ಯಾಸ ಸಮಾರಂಭವು ನಡೆಯಲಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




