ಮಂಗಳೂರು | ಬಿಜೆಪಿ ಸೇರಿದ ಮೊದಲ ದಿನವೇ ಪುತ್ತಿಲ ಪರಿವಾರದ ಕಾರ್ಯಕರ್ತನಿಂದ ಪತ್ರಕರ್ತರ ಮೇಲೆ ಗೂಂಡಾಗಿರಿ; ಆರೋಪ

Date:

Advertisements

ಅರುಣ್ ಕುಮಾರ್ ಪುತ್ತಿಲ ಪರಿವಾರದ ಕಾರ್ಯಕರ್ತನೊಬ್ಬ ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ಕಚೇರಿಯಲ್ಲೇ ಪತ್ರಕರ್ತರ ಮೇಲೆ ಶನಿವಾರ ಗೂಂಡಾಗಿರಿ ಎಸಗಿದ ಆರೋಪ ಕೇಳಿ ಬಂದಿದೆ.

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮವು ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದು, ಈ ಸಂದರ್ಭ ಪುತ್ತಿಲ ಪರಿವಾರದ ಕಾರ್ಯಕರ್ತ ಸಂದೀಪ್ ಉಪ್ಪಿನಂಗಡಿ ಎಂಬಾತ ಎಸಗಿರುವುದಾಗಿ ವರದಿಯಾಗಿದೆ.

ವರದಿ ಮಾಡಲು ಹೋದ ಮಾಧ್ಯಮದವರನ್ನು ತಳ್ಳಾಡಿದ್ದಲ್ಲದೆ ಅನುಚಿತವಾಗಿ ವರ್ತಿಸಿ, “ಮಾಧ್ಯಮದವರು ಇಲ್ಲಿ ಯಾಕೆ ಬರುವುದು? ನಮಗೆ ಮಾಧ್ಯಮದವರ ಅಗತ್ಯವಿಲ್ಲ. ನಾವು ಈಗ(ಪುತ್ತಿಲ ಪರಿವಾರ & ಬಿಜೆಪಿ) ಒಂದಾಗಿ ಆಯಿತು’ ಎಂದು ಸಂದೀಪ್ ಉಪ್ಪಿನಂಗಡಿ ಹೇಳಿಕೊಂಡಿದ್ದಾನೆ ಎಂದು ಪತ್ರಕರ್ತರು ಆರೋಪಿಸಿದ್ದಾರೆ.

Advertisements

ಪತ್ರಕರ್ತರು ಈತನ ವರ್ತನೆಗೆ ವಿರೋಧ ಸೂಚಿಸಿ, ಅಲ್ಲಿಂದ ತೆರಳಲು ಅನುವಾದಾಗ ವೇದಿಕೆಯಲ್ಲಿದ್ದ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಮಾಧಾನಿಸಿದ್ದಾರೆ.

ಇದನ್ನು ಓದಿದ್ದೀರಾ? ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ : ಉಲ್ಟಾ ಹೊಡೆದ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ!

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಬಿಜೆಪಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ ಗಮನ ಸೆಳೆದಿದ್ದ ಸಂಘಪರಿವಾರದ ಹಿನ್ನೆಲೆ ಇರುವ ಅರುಣ್ ಪುತ್ತಿಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಪುತ್ತಿಲ ಪರಿವಾರ ದೊಡ್ಡ ಸವಾಲು ಎಸೆದಿತ್ತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪುತ್ತಿಲ, ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ದೂಡುವಲ್ಲಿ ಯಶಸ್ವಿಯಾಗಿದ್ದರು. ಆ ಮೂಲಕ ಪುತ್ತಿಲ ತಮ್ಮ ಶಕ್ತಿ ಪ್ರದರ್ಶನವನ್ನು ಮಾಡಿದ್ದರು. ಆ ಬಳಿಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಂಸದ ನಳಿನ್ ಕಟೀಲ್‌ಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಲೇ ಬಿಜೆಪಿ ಸೇರ್ಪಡೆಯ ಸುಳಿವು ನೀಡಿದ್ದರು.

ಈ ಮಧ್ಯೆ ಕೆಲವು ದಿನಗಳ ಹಿಂದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅರುಣ್ ಪುತ್ತಿಲ ಭೇಟಿಯಾಗಿದ್ದರು. ಪಕ್ಷ ಸೇರ್ಪಡೆ ಎಂಬ ಸುದ್ದಿ ಹರಡಿತ್ತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಪುತ್ತಿಲ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ” ಎಂದಿದ್ದರು. ಇಂದು ಬೆಳಗ್ಗೆ ಉಲ್ಟಾ ಹೇಳಿಕೆ ನೀಡಿದ್ದ ಅವರು, “ರಾಜ್ಯಾಧ್ಯಕ್ಷರ ತೀರ್ಮಾನವೇ ನಮಗೆ ಅಂತಿಮ. ಇನ್ನು ಮತ್ತೆ ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆಗಳು ಇಲ್ಲ” ಎಂದು ಹೇಳಿಕೆ ನೀಡಿದ್ದರು. ಅದು ಗೊಂದಲಕ್ಕೂ ಕಾರಣವಾಗಿತ್ತು.

ಈ ನಡುವೆ ಶನಿವಾರ(ಇಂದು) ನಗರದ  ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಪರಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಗೂಂಡಾಗಿರಿ ನಡೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ...

ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ...

Download Eedina App Android / iOS

X