ವಿಮಾನ ನಿಲ್ದಾಣದಲ್ಲಿ ಶುಲ್ಕದ ಹೆಸರಲ್ಲಿ ಸುಲಿಗೆ: ಟ್ಯಾಕ್ಸಿ, ಕ್ಯಾಬ್‌ ಅಸೋಸಿಯೇಷನ್‌ ಧರಣಿ

Date:

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಗಳಿಂದ ಅತೀ ಹೆಚ್ಚಿನ ಶುಲ್ಕ ಪಡೆಯಲಾಗುತ್ತಿದ್ದು, ಅದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಕೆಂಜಾರು ವಿಮಾನ ನಿಲ್ದಾಣದ ಗೇಟ್‌ ಬಳಿ ನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸಿದರು.

- Advertisement -

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, “ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಸಂಸ್ಥೆ ಗುತ್ತಿಗೆಗೆ ಪಡೆದುಕೊಂಡ ಬಳಿಕ ಬಡ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರು ಮತ್ತು ಮಾಲಕರು ಸೇರಿದಂತೆ ಸಾರ್ವಜನಿಕರನ್ನೂ ಲೂಟಿಮಾಡಲು ಆರಂಭಿಸಿದೆ. ಸಂಸದರು ಶಾಸಕರು ಅದಾನಿ ಕಂಪೆನಿ ಜೊತೆ ಮಾತುಕತೆ ನಡೆಸಿದರೂ ಅವರ ಮಾತಿಗೂ ಬೆಲೆಕೊಡದೆ ನಮಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಆಟೊ ರಿಕ್ಷಾ, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿಗಳಿಂದ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಅದಾನಿಯವರಿಗೆ ಬಡವರ ದುಡಿಮೆಯ ಹಣಬೇಕಾ ಎಂದು ಪ್ರಶ್ನೆ ಮಾಡಿದ ರಘುಪತಿಭಟ್‌, “ಬಡವರಿಗೆ ಸಹಾಯ ಮಾಡುವ ಬದಲು ಅವರನ್ನು ಶುಲ್ಕದ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಈ ರೀತಿ ಸುಲಿಗೆ ಮಾಡುವ ಬದಲು ಅದಾನಿ ಭಿಕ್ಷೆ ಬೇಡಬಹುದು. ಇಲ್ಲಿನ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌ ಮತ್ತು ಸಾರ್ವಜನಿಕರ ವಾಹನಗಳಿಗೆ ಕನಿಷ್ಠ 10 ನಿಮಿಷಗಳ ಕಾಲಾವಕಾಶ ನೀಡಬೇಕು. 10 ನಿಮಿಷಗಳ ಬಳಿಕ 100ರೂ. ವಸೂಲು ಮಾಡಬೇಕು” ಎಂದು ಆಗ್ರಹಿಸಿದರು.

ಧರಣಿಯಲ್ಲಿ ದ.ಕ. ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಆನಂದ ಕೆ. ಅವರು, ದ.ಕ. ಜಿಲ್ಲಾ ಆನ್‌ ಲೈನ್‌ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಅಝೀಝ್‌, ಬಜ್ಪೆ ಪಟ್ಟಣ ಪಂಚಾಯತ್‌ ಅಧ್ಯಕ್ಷ ಲೋಕೇಶ್‌ ಪೂಜಾರಿ, ಮಾಜಿ ಶಾಸಕ ಮೊಯ್ದೀನ್‌ ಬಾವಾ ಸೇರಿದಂತೆ ದ.ಕ.- ಉಡುಪಿ ಜಿಲ್ಲೆಯ ವಿವಿಧ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌ ಚಾಲಕ ಮಾಲಕರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...