ಮಂಗಳೂರು | ಜ್ಯೂನಿಯರ್ಸ್‌ ಮೇಲೆ ಕ್ರೂರ ರ‍್ಯಾಂಗಿಂಗ್; 9 ಮಂದಿ ವಿರುದ್ಧ ಎಫ್‌ಐಆರ್

Date:

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಅಮಾನುಷವಾಗಿ ರ‍್ಯಾಗಿಂಗ್ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದಕ್ಕೆ 9 ಮಂದಿ ಸೀನಿಯರ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಮಂಗಳೂರು ನಗರ ಪೊಲೀಸರ ಮಾಹಿತಿಯ ಪ್ರಕಾರ, ಪ್ರಕರಣ ಸೆಪ್ಟೆಂಬರ್ 19ರಂದು ಮಧ್ಯಾಹ್ನ ಸುಮಾರು 3:19ಕ್ಕೆ ನಡೆದಿದೆ. ಕಾಲೇಜಿನ ಹೊರಗಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸೀನಿಯರ್‌ಗಳ ಗುಂಪು ಅಡ್ಡಗಟ್ಟಿ, ಬಲವಂತವಾಗಿ ಬೈಕ್‌ನಲ್ಲಿ ಕೂರಿಸಿ ಅಪಹರಿಸಿಕೊಂಡು ನಿರ್ಜನ ಮನೆಯೊಂದರ ಕೊಠಡಿಗೆ ಕರೆದೊಯ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಕೊಠಡಿಯಲ್ಲಿ ಅವರ ಬಟ್ಟೆಗಳನ್ನು ಬಿಚ್ಚಿಸಿ ಕೇವಲ ಚಡ್ಡಿಯಲ್ಲಿ ನಿಲ್ಲಿಸಲಾಗಿದೆ. ಚೀರಾಡಿದಾಗ ಬಾಯಿಗೆ ಬಟ್ಟೆ ಒತ್ತಿ ಹಿಡಿದು, ಬೆಲ್ಟ್ ಮತ್ತು ಹ್ಯಾಂಗರ್‌ನಿಂದ ಹೊಡೆದಿದ್ದಾರೆ. ಒಬ್ಬ ಆರೋಪಿ ಕುತ್ತಿಗೆ ಮತ್ತು ತಲೆಗೆ ಗುರಿಯಿಟ್ಟು ಕಬ್ಬಿಣದ ರಾಡಿನಿಂದ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ವೀಡಿಯೋ ಮಾಡಿಕೊಂಡಿದ್ದಾರೆ. ನಿತ್ರಾಣಗೊಂಡ ವಿದ್ಯಾರ್ಥಿಗಳು ಕುಡಿಯಲು ನೀರು ಕೇಳಿದಾಗ ಕಲುಷಿತ ನೀರು ಕೊಟ್ಟಿದ್ದಾರೆ, ಕುಡಿಯಲು ನಿರಾಕರಿಸಿದಾಗ ಮೈಮೇಲೆ ಚೆಲ್ಲಿದ್ದಾರೆ. “ಪೊಲೀಸರಿಗೆ ಅಥವಾ ಯಾರಿಗಾದರೂ ತಿಳಿಸಿದರೆ ಚಾಕುವಿನಿಂದ ತುಂಡು ತುಂಡಾಗಿ ಕತ್ತರಿಸುತ್ತೇವೆ” ಎಂದು ಜೀವಬೆದರಿಕೆ ಹಾಕಿದ್ದರು. ಸಂಜೆ 6 ಗಂಟೆಯವರೆಗೆ ಅವರನ್ನು ಕೂಡಿಹಾಕಲಾಗಿತ್ತು. ನಂತರ “ಕ್ಲೀನ್ ಶೇವ್ ಮಾಡಿಕೊಂಡು, ಶೂ ಹಾಕದೆ ಕ್ಲಾಸಿಗೆ ಬರಬೇಕು” ಎಂದು ಆದೇಶಿಸಿದ್ದರು.

ಭಯಗೊಂಡು ಊರಿಗೆ ಹೋಗಿದ್ದ ವಿದ್ಯಾರ್ಥಿಗಳು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಮರಳಿ ಸೆಪ್ಟೆಂಬರ್ 23ರಂದು ಮಂಗಳೂರಿಗೆ ಬಂದು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಮಂಗಳೂರು ದಕ್ಷಿಣದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಸೀದ್ ಅಮೀರ್, ಆದಿಲ್ ಎಂ., ಅರ್ಶಕ್, ಅನೀಶ್, ಉವೈಸ್, ರೋಹನ್ ರಮೇಶ್, ಆದಿಲ್ ವಿ.ಪಿ., ರೆಹಾನ್ ಎಂ.ಪಿ. ಹಾಗೂ ಶಿನಾಸ್ (ಸಿನಾನ್) ಎಂಬ 9 ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕೊಲೆ ಯತ್ನ, ಅಪಹರಣ, ಅಕ್ರಮ ಬಂಧನ, ಹಲ್ಲೆ ಹಾಗೂ ರ‍್ಯಾಗಿಂಗ್ ನಿಷೇಧ ಕಾಯ್ದೆಯಡಿ (ಬಿಎನ್‌ಎಸ್ ಕಲಂ 140(3), 127(2), 115(2), 118(1), 351(2), 109, 190 ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 116) ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಪ್ರಕರಣ ಶೈಕ್ಷಣಿಕ ಸಂಸ್ಥೆಗಳಲ್ಲಿ ರ‍್ಯಾಗಿಂಗ್ ವಿರುದ್ಧ ಕಠಿಣ ಕ್ರಮದ ಅಗತ್ಯವನ್ನು ಮತ್ತೊಮ್ಮೆ ಮನನ ಮಾಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ...

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...

ಸೌಜನ್ಯ ಪ್ರಕರಣದ ಮರುತನಿಖೆ: ಎಸ್‌ಐಟಿ ಅಧಿಕಾರಿಗಳ ನೇಮಕದ ಸುತ್ತ ಭುಗಿಲೆದ್ದ ಅಸಮಾಧಾನ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ (ಡಿ-ನೋವೊ) ಸುಪ್ರೀಂ ಕೋರ್ಟ್...

ವಿಜಯಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ: ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಕರೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...