ಮಂಗಳೂರು | ಮನರೇಗಾ ಸ್ವರೂಪ ಬದಲಾವಣೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯ ಹೆಸರು ಮತ್ತು ಸ್ವರೂಪ ಬದಲಾವಣೆಯ ವಿರುದ್ಧ ಹಾಗೂ ಸ್ವಾಯತ್ತ ಸಂಸ್ಥೆ ಇಡಿ ದುರುಪಯೋಗವನ್ನು ಖಂಡಿಸಿ ಮಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರನ್ನು ಸೋಮವಾರ ಪೊಲೀಸರು ತಡೆದು, ವಶಕ್ಕೆ ಪಡೆದರು.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಬಳಿ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಇ.ಡಿಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ವಿರುದ್ಧದ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಭಟನೆಯ ಬಳಿಕ ಪಾದಯಾತ್ರೆ ಮೂಲಕ ಹೊರಟು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸಿ ಪಿವಿಎಸ್ ಬಳಿಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪಾದಯಾತ್ರೆ ಹೊರಟ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಪೊಲೀಸರು ಮಲ್ಲಿಕಟ್ಟೆ ಸರ್ಕಲ್ ಬಳಿ ತಡೆದರು. ಪ್ರತಿಭಟನೆ ನಡೆಸಿದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಈ ಸುದ್ದಿ ಓದಿದ್ದೀರಾ? ಲೋಕಸಭೆ | ಮನರೇಗಾ ಕಾರ್ಮಿಕರ ಅನ್ನ ಕಸಿದ ಜಿ ರಾಮ್‌ ಜಿ: ಭುಗಿಲೆದ್ದ ವಿರೋಧ ಪಕ್ಷಗಳ ಪ್ರತಿಭಟನೆ

ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿ ಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ ಆರ್ ಲೋಬೊ, ಪಕ್ಷದ ಪ್ರಮುಖರಾದ ಎಂ ಎ ಗಪೂರ್, ಇನಾಯತ್ ಅಲಿ, ಸದಾಶಿವ ಉಳ್ಳಾಲ, ಕೆ ಅಶ್ರಫ್, ಶಾಲೆಟ್ ಪಿಂಟೊ, ಅಪ್ಪಿ, ಅಬ್ದುಲ್ ರವೂಫ್, ಸುರೇಶ್ ಬಳ್ಳಾಲ್, ಎಂ ಎಸ್ ಮುಹಮ್ಮದ್, ಶಶಿಧರ ಹೆಗ್ಡೆ, ಎಸ್ ಅಪ್ಪಿ ಸೇರಿದಂತೆ ನೂರಾರು ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...