ನವೆಂಬರ್ 18ರಂದು ಮಂಗಳೂರಿನ ಶ್ರೀ ಕುದ್ಮಲ್ ರಂಗರಾವ್ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡಿದ್ದ ದ.ಕ. ಜಿಲ್ಲಾ ಮಟ್ಟದ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಸಮ್ಮೇಳನದ ದಿನಾಂಕ ಮತ್ತು ಸ್ಥಳವನ್ನು ಶೀಘ್ರವೇ ಪ್ರಕಟಿಸಲಾಗುವುದು. ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲು ಹಾಗೂ ಸಾಂಪ್ರದಾಯಿಕ ಬ್ಯಾರಿ ಆಹಾರ ಸ್ಪರ್ಧೆಗೆ ಹೆಸರು ನೋಂದಾಯಿಸಿದವರು ದಿನಾಂಕ ಬದಲಾವಣೆಯನ್ನು ಗಮನಿಸಿ ಸಹಕರಿಸುವಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




