ಮಂಗಳೂರು ವಿಮಾನ ನಿಲ್ದಾಣದಲ್ಲಿ ನ.27ರಂದು ಅಣಕು ಕಾರ್ಯಾಚರಣೆ

Date:

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ 27 ರಂದು ತನ್ನ ಮೊದಲ ಸಮಗ್ರ ಅಣಕು ಕಾರ್ಯಾಚರಣೆ ನಡೆಸಲಿದೆ. ಈ ಬಾರಿ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸಂಭವಿಸುವ ವಿಮಾನ ಅಪಘಾತದ ಸನ್ನಿವೇಶವನ್ನು ಆಧರಿಸಿ ಅಣಕು ಕಾರ್ಯಾಚರಣೆ ನಡೆಯಲಿದೆ.

- Advertisement -

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ಈ ಅಣಕು ಕಾರ್ಯಾಚರಣೆ ನಡೆಯಲಿದ್ದು, ವಿಮಾನ ದುರಂತ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಏರೋಡೋಮ್ ತುರ್ತು ಪರಿಹಾರ ಕಾರ್ಯಾಚರಣೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ವಿವಿಧ ಇಲಾಖೆಗಳ ಸಂಘಟಿತ ಪ್ರತಿಕ್ರಿಯೆ ಮತ್ತು ಸನ್ನದ್ಧತೆಯನ್ನು ಪರೀಕ್ಷಿಸಿ ಮೌಲ್ಯಮಾಪನ ಮಾಡುವುದು ಇದರ ಉದ್ದೇಶವಾಗಿದೆ. ವಿಪತ್ತು ನಿರ್ವಹಣಾ ಅಭ್ಯಾಸದ ಭಾಗವಾಗಿ ನವೆಂಬರ್ 26ರಂದು ಟೇಬಲ್ ಟಾಪ್ ಕಾರ್ಯಾಚರಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ವಿಮಾನ ನಿಲ್ದಾಣದ ಆವರಣದೊಳಗಿನ ತುರ್ತು ಪರಿಸ್ಥಿತಿಗಿಂತ ಭಿನ್ನವಾಗಿ, ಈ ಬಾರಿ ವಿಮಾನ ನಿಲ್ದಾಣದ ಗಡಿಗೆ ಹೊಂದಿಕೊಂಡಿರುವ ಸಮತಟ್ಟಾದ ಹೊರ ಪ್ರದೇಶದಲ್ಲಿ ವಿಮಾನ ಅಪಘಾತ ಸಂಭವಿಸಿದ ಸನ್ನಿವೇಶವನ್ನು ಸೃಷ್ಟಿಸಲಾಗುತ್ತದೆ. ವಿಮಾನ ನಿಲ್ದಾಣದ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ಮೊದಲ ಸ್ಪಂದನಾ ತಂಡವಾಗಿ ಕಾರ್ಯನಿರ್ವಹಿಸಲಿದೆ.

ಈ ಸಮಗ್ರ ಅಣಕು ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಮಂಗಳೂರು ನಗರ ಪೊಲೀಸ್, ಆರೋಗ್ಯ ಇಲಾಖೆ, ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಇತರ ಸಂಬಂಧಿತ ಇಲಾಖೆ, ಸಂಸ್ಥೆಗಳು ಭಾಗವಹಿಸಲಿವೆ.

ನವೆಂಬರ್ 27 ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯುವ ಅಣಕು ಕಾರ್ಯಾಚರಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರ ನೇತೃತ್ವದಲ್ಲಿ ವಿಮಾನ ನಿಲ್ದಾಣ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಭೆ ನಡೆಯಿತು.

ಮಂಗಳೂರು ಉಪವಿಭಾಗಾಧಿಕಾರಿ (ಪ್ರಭಾರ) ಶ್ರೀಧರ್ ಮುಂದಲಮನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಜ. 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ; ಆಕ್ಷೇಪಣಾ ಅರ್ಜಿ ಸಲ್ಲಿಕೆಗೆ ಡಿ. 31 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ...

ಬಾಗಲಕೋಟೆ |ರೈತರನ್ನು ಸಬಲರನ್ನಾಗಿಸಿದಾಗ ತೋಟಗಾರಿಕೆ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕ;ಆರ್. ಗಿರೀಶ್

ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ, ತೋಟಗಾರಿಕೆಯಲ್ಲಿ ಯುವಕರಿಗೆ ಉದ್ಯಮಶೀಲತೆಯ ಅವಕಾಶ ಕಲ್ಪಿಸಿದಾಗ ಮಾತ್ರ...

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...

ಬಾಗೇಪಲ್ಲಿ | ಪ್ರಜಾ ಸೇವಾ ಆಂದೋಲನ ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ವೇದಿಕೆ : ತಹಶೀಲ್ದಾರ್ ಮನೀಷಾ

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜೊತೆಗೆ,...