ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ ಬಿಟ್ಟು 12 ದಿನಗಳ ಕಾಲ ತಾಳ್ಮೆಯಿಂದ ಕಾಯಿರಿ, ಖಂಡಿತ ಸಿಹಿಅಉದ್ಸಿ ಬರಲಿದೆ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಂಬರುವ ವಿಧಾನಮಂಡಲ ಅಧಿವೇಶನ ಮುಕ್ತಾಯಗೊಳ್ಳುವಷ್ಟರಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಯ ಕುರಿತು ಸರ್ಕಾರದ ವತಿಯಿಂದ ‘ಸಿಹಿ ಸುದ್ದಿ’ ನೀಡುವುದಾಗಿ ಮುಖ್ಯಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ ಎಂದು ಸೂಚಿಸಿದರು.
“ಆಶಾ ಕಾರ್ಯಕರ್ತೆಯರು ನಮ್ಮ ಕುಟುಂಬದ ಸದಸ್ಯರಿದ್ದಂತೆ. ಅವರ ಕಷ್ಟ-ಸುಖಗಳು ನಮಗೆ ಚೆನ್ನಾಗಿ ಅರ್ಥವಾ ಗುತ್ತವೆ. ಆದರೆ, ಸರ್ಕಾರ ಸುಳ್ಳು ಭರವಸೆಗಳನ್ನು ನೀಡಲು ಸಾಧ್ಯವಿಲ್ಲ. ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಮುಂಬರುವ ಅಧಿವೇಶನದ ಅಂತ್ಯದೊಳಗೆ ಖಂಡಿತವಾಗಿಯೂ ಸಿಹಿ ಸುದ್ದಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. 12 ದಿನಗಳ ಕಾಲ ಕಾದು, ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ತೊಂದರೆಯಾಗದಂತೆ ಕರ್ತವ್ಯಕ್ಕೆ ಹಾಜರಾಗಿ” ಎಂದು ಖಾದರ್ ಮನವಿ ಮಾಡಿದರು.
ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ)ದ ವ್ಯಾಪ್ತಿಯಲ್ಲಿ ಬರುತ್ತಾರೆ. ಕೇಂದ್ರವು ಕೇವಲ 2,000 ರೂ. ಹಾಗೂ 1 ಸಾವಿರ ಪ್ರೋತ್ಸಾಹಧನ ನೀಡುತ್ತಿದ್ದರೆ, ರಾಜ್ಯ ಸರ್ಕಾರ 5,000 ಸೇರಿಸಿ ಒಟ್ಟು 8,000 ರೂ. ಗೌರವಧನ ನೀಡುತ್ತಿದೆ. ರಾಜ್ಯದಲ್ಲಿ ಬಿಸಿಯೂಟ ಸಿಬ್ಬಂದಿ 4,000ರೂ.ಗಳಿಗೆ ಹಾಗೂ ಅತಿಥಿ ಶಿಕ್ಷಕರು 10-12 ಸಾವಿರ ರೂ.ಗಳಿಗೆ ದುಡಿಯುತ್ತಿದ್ದಾರೆ. ಸರ್ಕಾರ ಎಲ್ಲಾ ವರ್ಗದ ನೌಕರರನ್ನು ಸಮಾನವಾಗಿ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದರು.




