“ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು, ಭಾಷೆಯ ಸಾಹಿತ್ಯಿಕ ಸಂಪತ್ತು ಜಗದಗಲ ಪರಿಚಯವಾಗುವುದು” ಎಂದು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ಎಸ್. ರಾವ್ ಹೇಳಿದರು.
ನಗರದ ಪಾದುವ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾದ ಮಕ್ಕಳಿಗಾಗಿ ಇಂಗ್ಲೀಷ್ ಭಾಷೆಗೆ ಅನುವಾದಿಸಿದ ತುಳುನಾಡಿನ ಜನಪದ ಕಥೆಗಳ ಸರಣಿಯ ಐದು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಅವರು ಮಾತನಾಡಿ, “ತುಳುನಾಡಿನ ಕಥೆಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶದಿಂದ ಆಂಗ್ಲ ಆವೃತ್ತಿಗಳನ್ನು ಪ್ರಕಟಿಸಲಾಗಿದೆ” ಎಂದರು.
ಪಾದುವ ಕಾಲೇಜಿನ ಪ್ರಾಂಶುಪಾಲರಾದ ಅರುಣ್ ವಿಲ್ಸನ್ ಲೋಬೊ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಾದುವ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ರೋಸಿನ ಫ್ಲಾರೆನ್ಸ್ ಡಿಸೋಜ, ಪೋಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಮಮತಾ, ವಿದ್ಯಾರ್ಥಿ ಪ್ರತಿನಿಧಿ ವೈಷ್ಣವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ತುಳು ಅಕಾಡೆಮಿ ಸದಸ್ಯೆ ಅಕ್ಷಯ ಆರ್.ಶೆಟ್ಟಿ ಸ್ವಾಗತಿಸಿದರು. ಐಶ್ವರ್ಯ ವಂದಿಸಿದರು. ಜಯಂತ್ ಕಾರ್ಯಕ್ರಮ ನಿರೂಪಿಸಿದರು




