ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ನವೆಂಬರ್ 30ರಂದು ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮತನಾಡಿದ ಸಚಿವ ಖಾದರ್, “ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವತಿಯಿಂದ ಕರಾವಳಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆಯಲಿದೆ. ಸುಮಾರು 300 ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದ್ದು, ರಾಜ್ಯದ ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ” ಎಂದು ಹೇಳಿದರು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ.




