ಮಂಗಳೂರು | “ರಚನಾತ್ಮಕ ರಾಷ್ಟ್ರ ನಿರ್ಮಾಣಕ್ಕೆ ಪ್ರೀತಿ ಮತ್ತು ಸಹೋದರತ್ವದ ಸಂದೇಶ ಅತ್ಯಗತ್ಯ”: ಡಿಸಿಪಿ ಸ್ಯಾಮ್ ವರ್ಗೀಸ್

Date:

“ರಚನಾತ್ಮಕ ರಾಷ್ಟ್ರ ನಿರ್ಮಾಣಕ್ಕೆ ಪ್ರೀತಿ ಮತ್ತು ಸಹೋದರತ್ವದ ಸಂದೇಶ ಅತ್ಯಗತ್ಯ. ಎಂದು ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲಿಸ್‌ ಆಯುಕ್ತ ಸ್ಯಾಮ್ ವರ್ಗೀಸ್ ಅಭಿಪ್ರಾಯಪಟ್ಟರು.

- Advertisement -

ಆಲ್ ಇಂಡಿಯಾ ಪಯಾಮ್-ಎ-ಇನ್ಸಾನಿಯತ್ ಫೋರಮ್ (ಎಐಪಿಐಎಫ್) ಮಂಗಳೂರು ಘಟಕವು ನಗರದಲ್ಲಿ ಆಯೋಜಿಸಿದ್ದ ‘ಪೂರಕ ಮತ್ತು ಸಬಲೀಕರಣದ ವಾತಾವರಣದೊಂದಿಗೆ ಪ್ರಗತಿಪರ ರಾಷ್ಟ್ರ ನಿರ್ಮಾಣದತ್ತ’ ಎಂಬ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, “ಸಮಾಜದಲ್ಲಿ ಶಾಂತಿಯು ನೆರೆಹೊರೆಯವರ ಪರಸ್ಪರ ನಂಬಿಕೆ, ಸಮಾನತೆಯಿಂದ ಆರಂಭವಾಗುತ್ತದೆ. ಪ್ರಗತಿಪರ ರಾಷ್ಟ್ರವನ್ನು ನಿರ್ಮಿಸಬೇಕಾದರೆ ನಾವೆಲ್ಲ ಸಹೋದರತ್ವ ಮತ್ತು ಏಕತೆಯ ಸಂದೇಶವನ್ನು ಪಸರಿಸುತ್ತಲೇ ಇರಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಮಾದಕ ವಸ್ತುಗಳ ವಿರುದ್ಧದ ಹೋರಾಟವನ್ನು ಗ್ರೀಕ್ ಪುರಾಣದ ‘ಹೈಡ್ರಾ’ ರಾಕ್ಷಸನ ವಿರುದ್ಧದ ಯುದ್ಧಕ್ಕೆ ಹೋಲಿಸಿದ ಅವರು, “ಈ ಸವಾಲನ್ನು ಎದುರಿಸಲು ನಿರಂತರ ಪ್ರಯತ್ನ ಅಗತ್ಯ. ಸಮಾಜವಿರೋಧಿ ಶಕ್ತಿಗಳ ವಿರುದ್ಧದ ಸಾಮೂಹಿಕ ಹೋರಾಟವನ್ನು ಬಲಪಡಿಸಲು ಇಂತಹ ವಿಚಾರ ಸಂಕಿರಣಗಳು ಸಹಕಾರಿಯಾಗುತ್ತವೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಎಐಪಿಐಎಫ್ ವಕ್ತಾರ ಮೌಲಾನಾ ಸೈಯದ್ ಅಬ್ದುಲ್ ಅಲಿ ಹಸನಿ, ಕಣಚೂರು ಆರೋಗ್ಯ ವಿಜ್ಞಾನ ಸಲಹಾ ಮಂಡಳಿಯ ಅಧ್ಯಕ್ಷ ಮತ್ತು ವೈದ್ಯ ಡಾ. ಮುಹಮ್ಮದ್ ಇಸ್ಮಾಯಿಲ್ ಎಚ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೌಲಾನಾ ಫರ್ಹಾನ್ ನದ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಹ್ಮದ್ ಫೌಝಾನ್ ನದ್ವಿ ಕಾರ್ಯಕ್ರಮ ನಿರೂಪಿಸಿದರು.

ಸಂವಾದದಲ್ಲಿ ಪಾಲ್ಗೊಂಡಿದ್ದ ಎಐಪಿಐಎಫ್ ಸದಸ್ಯರು ಮತ್ತು ಹಲವು ಸಭಿಕರು ಶಾಂತಿಯುತ ಮತ್ತು ಪ್ರಗತಿಪರ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ಸವಾಲುಗಳನ್ನು ಎದುರಿಸುವ ಕುರಿತು ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂದಿನ ವರ್ಷದಿಂದ ದ್ವಿಭಾಷಾ ಸೂತ್ರ ಜಾರಿ, ಕೆಪಿಎಸ್‌ ಶಾಲೆಗಳಿಗೆ ಉಚಿತ ಬಸ್‌ ಸೌಲಭ್ಯ

ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವ...

ದೆಹಲಿ ತಾಪಮಾನ 11 ಡಿಗ್ರಿಗೆ ಇಳಿಕೆ: ಚಳಿಯ ಜೊತೆಗೆ ಹೆಚ್ಚಿದ ವಾಯುಮಾಲಿನ್ಯ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಮುಂಜಾನೆ, ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.3...

ಎಚ್.ಡಿ ಕುಮಾರಸ್ವಾಮಿ ಚಪಲ ಚನ್ನಿಗರಾಯ: ಡಿ.ಕೆ‌ ಸುರೇಶ್

ಮಂಗಳೂರಿನಲ್ಲಿ ನಡೆದ ಕ್ಯಾಬಿನೆಟ್ ಸಭೆ ಕೇವಲ ವ್ಯವಹಾರ ವಿಸ್ತರಣೆಗಾಗಿ ನಡೆದಿವೆ ಎಂದು...